ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ 
ರಾಜ್ಯ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಸೋಮೇಶ್ವರ ಬೀಚ್​ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

ಕರ್ನಾಟಕದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಸೋಮೇಶ್ವರ ಬೀಚ್​ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಕರ್ನಾಟಕದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಸೋಮೇಶ್ವರ ಬೀಚ್​ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕರಾವಳಿ ನಗರ ಮಂಗಳೂರಿನ ಸೋಮೇಶ್ವರ ಬೀಚ್​ನಲ್ಲಿ (Someshwar Beach) ನೈತಿಕ ಪೊಲೀಸ್ ಗಿರಿ (Moral Policing) ನಡೆದಿದ್ದು, ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೂವರು ಹಿಂದೂ ವಿದ್ಯಾರ್ಥಿನಿಯರು, ಮೂವರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ. ಮೂಲಗಳ ಪ್ರಕಾರ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದರು. ಇದೇ ವೇಳೆ ತಂಡವೊಂದು ಹಲ್ಲೆ ನಡೆಸಿದೆ ಎನ್ನಲಾಗಿದೆ.

ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರು ಸೋಮೇಶ್ವರ ಬೀಚ್​ಗೆ ವಿಹಾರಕ್ಕೆ ಬಂದಿದ್ದರು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದಕ್ಕೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿನಿಯರು ವಾಪಸ್ ಊರಿಗೆ ತೆರಳಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಉಳ್ಳಾಲ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 3ನೇ ಘಟನೆ
ಇನ್ನು ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್​ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ‌ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಇತ್ತೀಚೆಗೆ ಪೊಲೀಸ್​ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್​ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದರ ಬೆನ್ನಲ್ಲೇ ನೈತಿಕ ಪೊಲೀಸ್ ಗಿರಿಯ 3ನೇ ಘಟನೆ ವರದಿಯಾಗಿದೆ.

ಈ ಹಿಂದೆ ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್​ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಆ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಕೂಡ ನೈತಿಕ ಪೊಲೀಸ್ ಗಿರಿ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT