ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಹೊರಗೆ ಹಾಕಿದ ವಿಧಾನಸೌಧ ಸಿಬ್ಬಂದಿ 
ರಾಜ್ಯ

ವಿಧಾನಸೌಧ ಕೊಠಡಿಯಿಂದ ಮಾಜಿ ಸಿಎಂಗಳ ಫೋಟೋ ಜೊತೆ ಸಿದ್ಧಗಂಗಾ ಶ್ರೀಗಳ ಭಾವಚಿತ್ರ ಕೂಡ ಹೊರಕ್ಕೆ: ಬಿಜೆಪಿ ಕೆಂಡ

ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಫೋಟೋಗಳ ಜೊತೆಗೆ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಫೋಟೋವನ್ನು ಕೂಡ ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು: ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಫೋಟೋಗಳ ಜೊತೆಗೆ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಫೋಟೋವನ್ನು ಕೂಡ ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್​.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ತೆರವುಗೊಳಿಸಿ, ಪಡಸಾಲೆಯಲ್ಲಿ ರಾಶಿ ಹಾಕಿರುವುದನ್ನು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. 

ವಿಧಾನಸೌಧ 3ನೇ ಮಹಡಿಯ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಕೆ.ಎನ್.ರಾಜಣ್ಣ ಅವರ ಕಚೇರಿಗಳಿಂದ ಮಾಜಿ ಸಿಎಂಗಳಾದ ಎಚ್‌ಡಿ ಕುಮಾರಸ್ವಾಮಿ, ಬಿಎಸ್ ಬೊಮ್ಮಾಯಿ ಮತ್ತು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಫೋಟೋಗಳನ್ನು ತೆರವುಗೊಳಿಸಿದರು. ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮಾಡಿ, ‘ಇದು ಅಹಂಕಾರದ ಅಹಂಕಾರದ ಪರಮಾವಧಿ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

'ಆಡಳಿತ ಪಕ್ಷ ಕಾಂಗ್ರೆಸ್​ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ ಮತ್ತು ಶತ್ರುಭಾವ. ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜ್ಯನೀಯ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೋರಬೇಕು. ಜತೆಗೆ ಡಾ। ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಕೊಠಡಿಯೊಳಗೆ ಲಗತ್ತಿಸಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT