ಸಂವಿಧಾನ ಪ್ರಸ್ತಾವನೆ ಓದಿದ ಸಚಿವ ಹೆಚ್ ಸಿ ಮಹದೇವಪ್ಪ 
ರಾಜ್ಯ

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಕಡ್ಡಾಯ: ಸಚಿವ ಹೆಚ್ ಸಿ ಮಹದೇವಪ್ಪ

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಮತ್ತು ಅರ್ಥೈಸುವುದನ್ನು ಕಡ್ಡಾಯಗೊಳಿಸಿ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಮತ್ತು ಅರ್ಥೈಸುವುದನ್ನು ಕಡ್ಡಾಯಗೊಳಿಸಿ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.

ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ (Indian Constitution) ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ (HC Mahadevappa) ಮಾಹಿತಿ ನೀಡಿದ್ದು, ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.

‘ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಇಂದು ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಿಂದ ಟ್ವೀಟ್ ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಸಭೆಗೂ  ಮುನ್ನ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸಂವಿಧಾನದ ಪೀಠಿಕೆಯನ್ನು ಓದಿದರು. ರಾಜ್ಯಾದ್ಯಂತ ಶಾಲೆ, ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸುವುದು ಕಡ್ಡಾಯಗೊಳಿಸಲಾಗಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್