ಮುಖ್ಯಮಂತ್ರಿಗಳೊಂದಿಗೆ ಸರ್ಕಾರದ ಅಧಿಕಾರಿಗಳ ಸಭೆ 
ರಾಜ್ಯ

ಕಾಂಗ್ರೆಸ್ ನ ಮೂರು ಗ್ಯಾರಂಟಿಗಳಿಗೆ ಅನುಮೋದನೆ?: ಸರ್ಕಾರಕ್ಕೆ ನೀಲನಕ್ಷೆ ಸಲ್ಲಿಸಿದ ಹಣಕಾಸು ಇಲಾಖೆ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಅದರಲ್ಲಿ ಮೂರು ಗ್ಯಾರಂಟಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಅದರಲ್ಲಿ ಮೂರು ಗ್ಯಾರಂಟಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಮೂರು ಗ್ಯಾರಂಟಿ ಯೋಜನೆಗಳಾದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ, ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಸರ್ಕಾರದ 5 ಗ್ಯಾರಂಟಿ ಕಾರ್ಯಕ್ರಮಗಳ ಕುರಿತು ವರದಿ ಸಲ್ಲಿಸಿದರು.

ಹಣಕಾಸು ಇಲಾಖೆ ಅಧಿಕಾರಿಗಳು(FDOs) ಪ್ರತಿ ಯೋಜನೆಯ ನೀಲನಕ್ಷೆಯನ್ನು ಮುಖ್ಯಮಂತ್ರಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಸಲ್ಲಿಸಿದ್ದಾರೆ. ಪ್ರತಿ ಗ್ಯಾರಂಟಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಎಷ್ಟು ಖರ್ಚಾಗುತ್ತದೆ, ಯಾವಾಗ ಹೇಗೆ ಜಾರಿ ಮಾಡಬಹುದು ಎಂದು ನೀಲನಕ್ಷೆಯಲ್ಲಿ ವಿವರಿಸಲಾಗಿದೆ. 

ಸರ್ಕಾರಕ್ಕೆ ಎಷ್ಟು ಹೊರೆ?: ಹಣಕಾಸು ಇಲಾಖೆ ಅಧಿಕಾರಿಗಳು ಮತ್ತು ಮುಖ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ಎರಡು ಪ್ರಸ್ತಾವನೆಗಳ ಪ್ರಕಾರ ಗ್ಯಾರಂಟಿ ಭಾಗ್ಯಗಳನ್ನು ಯಾವುದೇ ಷರತ್ತುಗಳಿಲ್ಲದೆ ವಿಧಿಸಿದರೆ ಸರ್ಕಾರದ ಬೊಕ್ಕಸಕ್ಕೆ 1 ಲಕ್ಷ ಕೋಟಿ ರೂಪಾಯಿ ಹೊರೆಯಾಗುತ್ತದೆ. ಷರತ್ತುಗಳನ್ನು ವಿಧಿಸಿ ಗ್ಯಾರಂಟಿಗಳನ್ನು ಜಾರಿಗೆ ತಂದರೆ ಸರ್ಕಾರಕ್ಕೆ 50 ಸಾವಿರ ಕೋಟಿ ರೂಪಾಯಿ ಹೊರೆ ಬೀಳಲಿದೆ.

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಇನ್ನು ಕೆಲವೇ ನಿಮಿಷಗಳಲ್ಲಿ ಮುಕ್ತಾಯವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!