ಮೈಸೂರು: ಕಾಡಾನೆ ದಾಳಿಗೆ ರೈತ ಬಲಿ
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಿರೇಹಳ್ಳಿ ಬಳಿ ಕಾಡಾನೆ ದಾಳಿಯಿಂದ ರೈತ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಮೈಸೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಿರೇಹಳ್ಳಿ ಬಳಿ ಕಾಡಾನೆ ದಾಳಿಯಿಂದ ರೈತ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.
ಮೃತ ರೈತನನ್ನು ರವಿ(42) ಎಂದು ಗುರುತಿಸಲಾಗಿದ್ದು, ಬೆಳೆ ಕಾಯಲು ಜಮೀನಿಗೆ ಹೋಗಿದ್ದಾಗ ಕಾಡಾನೆ ದಾಳಿ ಮಾಡಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ಮಾಡಿದ್ದಾರೆ. ಮೃತ ರೈತನ ಕುಟುಂಬಕ್ಕೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.