ರಾಜ್ಯ

ಒಡಿಶಾ ರೈಲು ದುರಂತ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ.ಶಿವಕುಮಾರ್ ಸಂತಾಪ

Manjula VN

ಬೆಂಗಳೂರು: ಒಡಿಶಾ ರಾಜ್ಯದ ಬಾಲಸೋರ್ ಬಳಿ 7 ವರ್ಷದಲ್ಲೇ ಕಂಡು ಕೇಳರಿಯದ ಭೀಕರ ರೈಲು ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ 233 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ, ಒಡಿಶಾದ ಬಾಲಸೋರ್‌ನಿಂದ ಬಂದ ಹೃದಯ ವಿದ್ರಾವಕ ಸುದ್ದಿಯಿಂದ ಅತೀವ್ರ ನೋವು ತಂದಿದೆ. ರೈಲಿನ ಬೋಗಿಗಳು ಹಳಿತಪ್ಪು, ಭಾರೀ ಅಪಘಾತ ಸಂಭವಿಸಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆಂದು ತಿಳಿಸಿದ್ದಾರೆ.

ಈ ನಡುವೆ ತಮಿಳುನಾಡು ರಾಜ್ಯ ಸರ್ಕಾರ ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, 1 ದಿನ ಶೋಕಾಚರಣೆಯನ್ನು ಘೋಷಣೆ ಮಾಡಿದೆ.

SCROLL FOR NEXT