ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಇನ್ನೂ 50 ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಸರ್ಕಾರ ನಿರ್ಧಾರ

ರಾಜಧಾನಿ ಬೆಂಗಳೂರಿನಲ್ಲಿ ಶೀಘ್ರದಲ್ಲಿ 50 ಇಂದಿರಾ ಕ್ಯಾಂಟೀನ್ ಗಳನ್ನು ಹೊಸದಾಗಿ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶೀಘ್ರದಲ್ಲಿ 50 ಇಂದಿರಾ ಕ್ಯಾಂಟೀನ್ ಗಳನ್ನು ಹೊಸದಾಗಿ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಇಂದಿರಾ ಕ್ಯಾಂಟೀನ್ ಸಂಖ್ಯೆಯನ್ನು 198 ರಿಂದ 250ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಮೂಲಕ ಬಡವರ ಇಂದಿರಾ ಕ್ಯಾಂಟೀನ್ ಜನರ ಹೊಟ್ಟೆ ತುಂಬಿಸಲಿದೆ. ಗುಣಮಟ್ಟದ ಆಹಾರ ನೀಡಲು ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಹೆಚ್ಚುವರಿಯಾಗಿ 50 ಇಂದಿರಾ ಕ್ಯಾಂಟೀನ್ ತಲೆ ಎತ್ತಲಿದ್ದು, ವಿವಿಧ ಬಗೆಯ ತಿಂಡಿ ಊಟ ಸಿಗಲಿದೆ. ಜೂನ್ 29 ರಿಂದ ಕ್ಯಾಂಟೀನ್ ಆರಂಭವಾಗಲಿದ್ದು, ತಿಂಡಿಗೆ 10 ರೂ, ಊಟಕ್ಕೆ 20 ರೂ ಬೆಲೆ ನಿಗದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಲೆ ಏರಿಸಿ ಶುಚಿಕರ ತಿಂಡಿ ಊಟ ನೀಡಲು ಸಿದ್ದತೆ ನಡೆಸಲಾಗಿದೆ ಎನ್ನಲಾಗಿದೆ. 

ಇಂದಿರಾ ಕ್ಯಾಂಟೀನ್‌ನಲ್ಲಿ ಬೆಳಗ್ಗೆ ತಿಂಡಿಗೆ 2 ಇಡ್ಲಿ 1 ವಡೆ, ಉಪ್ಪಿಟ್ಟು, ಕೇಸರಿಬಾತ್, ಬಿಸಿಬೇಳೆ ಬಾತ್, ಪೂಳಿಯೋಗೆರೆ, ಚಿತ್ರಾನ್ನ , ವಾಂಗಿಬಾತ್, , ರೈಸ್ ಬಾತ್ ಟೋಮ್ಯಾಟೋ ಬಾತ್ ಸಿಗಲಿದೆ. ಮಧ್ಯಾಹ್ನ ಊಟಕ್ಕೆ ಒಂದು ಚಪಾತಿ, ಮುದ್ದೆ, ಒಂದು ವೆಜ್ ಪಲ್ಯಾ, ಕಪ್ ವೈಟ್ ರೈಸ್, ಸಾಂಬಾರ್ ಹಾಗೂ ರಸಂ, ವೆಜ್ ಪಲ್ಯಾ ಸಿಗಲಿದೆ.

ಇನ್ನು ವಾರದಲ್ಲಿ ಮೂರು ದಿನ ಮಧ್ಯಾಹ್ನ ಸಿಹಿ ತಿಂಡಿ, ಹೋಳಿಗೆ, ಅಕ್ಕಿಪಾಯಸ, ಕೇಸರಿ ಬಾತ್ ಹಾಗೂ ರಾತ್ರಿ ಊಟಕ್ಕೆ ರೈಸ್ ಬಾತ್, ಅನ್ನ ಸಾಂಬಾರ್ ಇರಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ