ರಾಜ್ಯ

ಅನ್ನ ಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಅಕ್ಕಿ ಉಚಿತ ವಿತರಣೆ; ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ

Ramyashree GN

ಬೆಂಗಳೂರು: ಜುಲೈ 1 ರಿಂದ ಜಾರಿಗೆ ಬರುವಂತೆ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಜನರಿಗೆ ನೀಡಿದ್ದ ‘ಅನ್ನ ಭಾಗ್ಯ’ ಗ್ಯಾರಂಟಿಯನ್ನು ಗಮನದಲ್ಲಿಟ್ಟುಕೊಂಡು ಆದೇಶವನ್ನು ಹೊರಡಿಸಲಾಗಿದೆ. 

ವಾಸ್ತವವಾಗಿ, ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಪ್ರಕಾರ, ಎಎವೈ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಕ್ಕೆ ಪ್ರತಿ ವ್ಯಕ್ತಿಗೆ 5 ಕೆಜಿಯಂತೆ 35 ಕೆಜಿ ಆಹಾರ ಧಾನ್ಯಗಳನ್ನು ಕೇಂದ್ರ ಸರ್ಕಾರವು ವಿತರಿಸುತ್ತಿದೆ.

ರಾಜ್ಯ ಸರ್ಕಾರವು ಇದೀಗ ಫಲಾನುಭವಿಗೆ ಹೆಚ್ಚುವರಿಯಾಗಿ ಇನ್ನು 5 ಕೆಜಿ ಧಾನ್ಯಗಳನ್ನು ಉಚಿತವಾಗಿ ವಿತರಿಸುತ್ತಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಆದೇಶ ಹೊರಡಿಸಲಾಗಿದೆ. ಎಎವೈ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಅರ್ಹರಾಗಿರುತ್ತಾರೆ.

SCROLL FOR NEXT