ಮಹಿಳೆ ಬಲಿ ಪಡೆದ ಕೆಎಸ್ ಆರ್ ಟಿಸಿ ಬಸ್ 
ರಾಜ್ಯ

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆ ದುರ್ಮರಣ

ನಗರದಲ್ಲಿ  ಭಾನುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಯಮರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್  ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ.

ಬೆಂಗಳೂರು: ನಗರದಲ್ಲಿ  ಭಾನುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಯಮರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ. ಲತಾ (55) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಹೆಬ್ಬಾಳ ಕೆಂಪಾಪುರದ ಲತಾ, ಪತಿ ಅನಂತರಾಮಕೃಷ್ಣರ ಜೊತೆಗೆ ಬೈಕ್ ನಲ್ಲಿ ಹೊರಟಿದ್ದಾಗ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ಉಪ್ಪಾರ ಪೇಟೆ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಶೇಷಾದ್ರಿ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಮೆಜೆಸ್ಟಿಕ್ ನಿಂದ ಕೆ.ಆರ್.ವೃತ್ತದತ್ತ ಹೊರಟಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಸಮೇತ ರಸ್ತೆ ಮೇಲೆ ಬಿದ್ದ ಲತಾ ಅವರ ತಲೆ ಮೇಲೆಯೇ ಬಸ್ಸಿನ ಚಕ್ರ ಹರಿದು ಹೋಗಿದೆ. ಇದರಿಂದಾಗಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅನಂತರಾಮಕೃಷ್ಣ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಬಸ್ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೊಟಕ್ಕೆ ತಿಳಿದುಬಂದಿದೆ. ಬಸ್ ಜಪ್ತಿ ಮಾಡಿರುವ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!