ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು 
ರಾಜ್ಯ

ರೈಲು ಸೇವೆಯಲ್ಲಿ ವ್ಯತ್ಯಯ:ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ, ಆಹಾರ, ನೆರವು ಪೂರೈಕೆ

ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ಅಧಿಕಾರಿಗಳು ಆಹಾರ, ವೈದ್ಯಕೀಯ ಸೌಲಭ್ಯ ಒದಗಿಸಿದ್ದಾರೆ.

ಬೆಂಗಳೂರು: ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ಕಾರ್ಮಿಕರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಿದ್ದಾರೆ.

ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತದ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದ್ದು, ಈಶಾನ್ಯ ರಾಜ್ಯಗಳಿಗೆ ಕೋಲ್ಕತ್ತಾ ಮುಂತಾದ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾನದಲ್ಲೇ ದಿನ ಕಳೆಯುವಂತಹ ಪರಿಸ್ಥಿತಿ ಒದಗಿದ್ದರಿಂದ, ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಬಿಬಿಎಂಪಿ ವಲಯ ಆಯುಕ್ತ ಪಿ.ಎನ್.ರವೀಂದ್ರ, ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ಮತ್ತು ತಂಡದವರ ಮಾರ್ಗದರ್ಶನದಲ್ಲಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಸುಮಾರು 1500 ವಲಸೆ ಕಾರ್ಮಿಕರಿಗೆ ಊಟ, ತಿಂಡಿ, ನೀರು ಇತ್ಯಾದಿಗಳ ವ್ಯವಸ್ಥೆಯನ್ನು ಪೂರೈಸಲಾಗಿದೆ.ಬಿಬಿಎಂಪಿ ವತಿಯಿಂದ ಅವರಿಗೆ ವೈದ್ಯಕೀಯ ಸೌಲಭ್ಯ ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಪಾಟೀಲ್, ಕಾರ್ಮಿಕ ಇಲಾಖೆ ಆಯುಕ್ತರು, ಉಮೇಶ್, ಉಪ ಕಾರ್ಮಿಕ ಆಯುಕ್ತರು,ಸಂತೋಷ್ ಹಿಪ್ಪರಗಿ, ಸಹಾಯಕ ಕಾರ್ಮಿಕ ಆಯುಕ್ತರು, ಇನ್ನಿತರ ಅಧಿಕಾರಿಗಳು ಪರಿಹಾರ ಕಾರ್ಯದ ನೇತೃತ್ವ ವಹಿಸಿದ್ದರು. ಈ ಪರಿಹಾರ ಕಾರ್ಯಕ್ಕೆ ಜೆಎಂಸಿ, ಕೆ೨ಕೆ, ಡಿಮರ‍್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳು ಬೆಂಬಲ ನೀಡುವ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚಿದ್ದಾರೆ.

ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ತಂಗಿರುವ ಪ್ರಯಾಣಿಕರ ಕಷ್ಟಗಳಿಗೆ ಸ್ಪಂದಿಸಿ, ಮರ‍್ಸಿ ಫೌಂಡೇಷನ್ , ಶ್ರೀ ತೌಸೀಫ್ ಮತ್ತು ತನ್ವೀರ್ , ಶ್ರೀ ಕ್ಲಿಫ್ಟಿನ್ ಹಾಗೂ ಮೈತ್ರಿ ಹಾಗೂ ತಂಡದವರ ಸ್ವಯಂ ಸೇವಕರು ಕೈ ಜೋಡಿಸಿದರು. ಮುಖ್ಯಮಂತ್ರಿಗಳು ಕಾರ್ಮಿಕರ ನೆರವಿಗೆ ಶ್ರಮಿಸಿದ ಸಂಘ ಸಂಸ್ಥೆಗಳು, ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT