ಜಗಳ ನಡೆದು ಹತ್ಯೆಗೊಂಡ ಯುವಕ 
ರಾಜ್ಯ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ವಿಚಾರಕ್ಕೆ ಜಗಳ; ಯುವಕನ ಕೊಲೆಯಲ್ಲಿ ಅಂತ್ಯ

ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.

ರಾಮನಗರ: ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ.

ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್​ನಲ್ಲಿ ಕೆಲಸ ಮಾಡ್ತಿದ್ದ ಪವನ್​ಕುಮಾರ್​(26 ವರ್ಷ) ಹತ್ಯೆ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್​​ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಟೋಲ್​ನಿಂದ ಹಿಂಬಾಲಿಸಿಕೊಂಡು ಬಂದು ದುಷ್ಕರ್ಮಿಗಳು ಪವನ್​​ ಹತ್ಯೆಗೈದಿದ್ದಾರೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟ್ಟಿದ್ದ. ಈ ವೇಳೆ ಪವನ್​ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್​ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT