ದ್ರೌಪದಿ ಮುರ್ಮು 
ರಾಜ್ಯ

'ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ': ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕರ್ನಾಟಕದ ಮಹಿಳೆ ಕನ್ನಡದಲ್ಲಿ ಪತ್ರ!

ಚಿಕ್ಕಮಗಳೂರು ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಬಯಲಿನಲ್ಲಿ ಪ್ರಕೃತಿಯ ಕರೆಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಿಕ್ಕಮಗಳೂರು: ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಬಯಲಿನಲ್ಲಿ ಪ್ರಕೃತಿಯ ಕರೆಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕನ್ನಡದಲ್ಲಿಯೇ ಪತ್ರ ಬರೆದಿರುವ ಜಡೆಮ್ಮ ಎಂಬ ಭಕ್ತೆ ತನಗಾದ ಸಂಕಷ್ಟವನ್ನು ಸವಿಸ್ತಾರವಾಗಿ ವಿವರಿಸಿದ್ದಾರೆ.

ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣವನ್ನು ಖಚಿತಪಡಿಸಿಕೊಳ್ಳಬೇಕು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮಂತಹ ಮಹಿಳೆಗೆ ಸ್ಫೂರ್ತಿ ಮತ್ತು ಆತ್ಮವಿಶ್ವಾಸದ ಸಂಕೇತ. ನನ್ನಂತಹ ಸಾಮಾನ್ಯ ಮಹಿಳೆಯರ ನೋವನ್ನು ತಿಳಿಸುವುದು ಪತ್ರದ ಮುಖ್ಯ ಉದ್ದೇಶ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

'ಕೆಲವು ದಿನಗಳ ಹಿಂದೆ ನಾನು ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಸೇರಿದಂತೆ ಎಲ್ಲಾ ಹಿಂದೂ ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ಬಾಬಾಬುಡನ್‌ಗಿರಿಯಲ್ಲಿ, ನಾನು ಪ್ರಕೃತಿಯ ಕರೆಗೆ ಹೋಗಬೇಕಾಯಿತು. ಅಲ್ಲಿ ನನಗೆ ಯಾವುದೇ ಶೌಚಾಲಯ ಕಾಣಿಸಲಿಲ್ಲ. ಶೌಚಾಲಯಕ್ಕಾಗಿ ಎಷ್ಟೇ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ' ಎಂದಿದ್ದಾರೆ.

'ನಂತರ ಸೀತಾಳಯ್ಯನಗಿರಿ ಹತ್ತಿ ಸಾರ್ವಜನಿಕ ಶೌಚಾಲಯ ಹುಡುಕಿದೆ. ಕ್ಷಣಕ್ಷಣಕ್ಕೂ ತಡೆಯಲಾರದ ಸ್ಥಿತಿ ನಿರ್ಮಾಣವಾಗುತ್ತಿತ್ತು. ಸಹಿಸಲು ಅಸಾಧ್ಯವಾಯಿತು ಮತ್ತು ಅವಮಾನ ಸಹಿಸಿಕೊಂಡು ಸಾರ್ವಜನಿಕ ಸ್ಥಳದಲ್ಲೇ ಮೂತ್ರ ವಿಸರ್ಜನೆ ಮಾಡಿದೆ' ಎಂದಿದ್ದಾರೆ.

'ಪ್ರತಿದಿನವೂ ಜನರು ತಮ್ಮ ಧರ್ಮ ಮತ್ತು ದೇವರಿಗಾಗಿ ಹೋರಾಡುತ್ತಾರೆ. ಆದರೆ, ಶೌಚಾಲಯಗಳನ್ನು ನಿರ್ಮಿಸುವ ಬಗ್ಗೆ ಅವರ ನಿರ್ಲಕ್ಷ್ಯ ದುರದೃಷ್ಟಕರ. ಪ್ರಕೃತಿಯ ಕರೆಗೆ ನಾವು ಯಾವ ಧರ್ಮದವರು ಎಂಬುದನ್ನು ಮರೆತು ಅದಕ್ಕೆ ಒತ್ತು ನೀಡುತ್ತೇವೆ. ಜಗತ್ತಿನಲ್ಲಿ ಎಲ್ಲಾ ಧರ್ಮದ ಜನರು ಬಳಸುವ ಯಾವುದಾದರು ಸ್ಥಳವಿದೆ ಎಂದಾದರೆ ಅದು ಶೌಚಾಲಯವಾಗಿದೆ' ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನೀವು ಕೂಡ ನನ್ನಂತೆ ಹೆಣ್ಣೇ. ಆದರೆ, ನೀವು ಅಧಿಕಾರದಲ್ಲಿರುವುದರಿಂದ ಮತ್ತು ನಿಮ್ಮ ಸೇವೆ ಮಾಡಲು ಜನರಿರುವುದರಿಂದ ನಾನು ಎದುರಿಸುವ ಸಮಸ್ಯೆಗಳನ್ನು ನೀವು ಎದುರಿಸುವುದಿಲ್ಲ. ಆದರೆ, ಶೌಚಾಲಯ ಇಲ್ಲದಿರುವುದು ನನ್ನಂತಹ ಮಹಿಳೆಯರ ಘನತೆಗೆ ಕುಂದು ತಂದಿದೆ. ಪ್ರಕೃತಿಯ ಕರೆಗೆ ಹಾಜರಾಗುವ ಬಗ್ಗೆ ಸಾಮಾನ್ಯ ಮಹಿಳೆಯ ಒತ್ತಡವನ್ನು ನೀವು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

ಮಹಿಳೆಯರು ಎದುರಿಸುತ್ತಿರುವ ಕಷ್ಟಗಳು ಮಹಿಳೆಯರಿಗಷ್ಟೇ ತಿಳಿದಿದೆ. ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ಸಂವಿಧಾನದ 19 ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ. ನಾವು ಮಂಗಳ ಗ್ರಹ ತಲುಪಿದ್ದೇವೆ. ಆದರೆ, ಈ ಯಾತ್ರಾ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಿಸಲು ಸಾಧ್ಯವಾಗಿಲ್ಲ ಎಂದು ದೂರಿದ್ದಾರೆ.

'ಭಾರತವು ವಿಶ್ವದಲ್ಲಿ ಮಧುಮೇಹದ ರಾಜಧಾನಿಯಾಗಿದೆ. ಅವರು ಸಾರ್ವಜನಿಕ ಶೌಚಾಲಯಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ನೀವು ಇಲ್ಲಿ ಶೌಚಾಲಯವನ್ನು ನಿರ್ಮಿಸಿದರೆ, ಕರ್ನಾಟಕದ ಜನರು ಮರೆಯುವುದಿಲ್ಲ' ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT