ಎದ್ದೇಳು ಕರ್ನಾಟಕ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿ ಮರು ಪರಿಶೀಲಿಸಿ ಹೊಸ ನೀತಿ ಜಾರಿ, ಹಲವು ಜನ ವಿರೋಧಿ ಕಾಯ್ದೆ ರದ್ದುಪಡಿಸಲು ಕ್ರಮ- ಸಿಎಂ ಸಿದ್ದರಾಮಯ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಮಾಡುವ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾನಾ ಸಂಘಟನೆಗಳ ಮಹಾ ಒಕ್ಕೂಟವಾದ "ಎದ್ದೇಳು ಕರ್ನಾಟಕ" ದ ಕಾರ್ಯಕಾರಿ ಮಂಡಳಿಯ ನಿಯೋಗದೊಂದಿಗೆ ಮಾತನಾಡಿದ, ಮುಖ್ಯಮಂತ್ರಿ, ರಾಜ್ಯದ ಜನತೆಗೆ ನೆಮ್ಮದಿಯ ವಾತಾವರಣ ಸೃಷ್ಟಿಸಲು, ರೈತರ ಹಿತ ಕಾಪಾಡಲು ಹಾಗೂ ಮಕ್ಕಳ ಭವಿಷ್ಯವನ್ನು ಸುಭದ್ರಗೊಳಿಸಲು ಬದ್ದರಿದ್ದೇವೆ ಎಂದಿದ್ದಾರೆ.

ರಾಜ್ಯದಲ್ಲಿ ಬಡವರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶ ಸೃಷ್ಟಿಯಾಗಿತ್ತು. ಇದನ್ನು ಬದಲಾಯಿಸಿ, ಈ ವರ್ಗಗಳ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಕೆಲಸ ಮಾಡುತ್ತೇವೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.

ನಾಡಿನ ಜನತೆ ಬಿಜೆಪಿ, ಆರ್ ಎಸ್ ಎಸ್ ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ.ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿಚಾರದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಂಡು‌ ಜನರಲ್ಲಿ ಸುರಕ್ಷತೆಯ ಭಾವ ಮೂಡಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ.

ನಾಡಿನ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇವೆ. ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುತ್ತೇವೆ. ಇದಕ್ಕೆ ವಾರ್ಷಿಕ 59,000 ಕೋಟಿ ರೂ. ಹಣಕಾಸಿನ ಅಗತ್ಯವಿದ್ದು, ಪ್ರಸಕ್ತ ವರ್ಷದ ಬಾಕಿ ಉಳಿದ ತಿಂಗಳುಗಳಿಗೆ ಯೋಜನೆ ಅನುಷ್ಠಾನಗೊಳಿಸಲು 41,000 ಕೋಟಿ ರೂ. ಗಳ ಅಗತ್ಯವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT