ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ತುಮಕೂರಿನಿಂದ ಯುವತಿಯನ್ನು ಕರೆಸಿಕೊಂಡು ಸ್ನೇಹಿತನ ರೂಂನಲ್ಲಿ ರೇಪ್ ಮಾಡಿದ ಯುವಕ!

ಗಿರಿನಗರದಲ್ಲಿ ಯುವತಿಯ ಮೇಲೆ ಸ್ನೇಹಿತರೇ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.

ಬೆಂಗಳೂರು: ಗಿರಿನಗರದಲ್ಲಿ ಯುವತಿಯ ಮೇಲೆ ಸ್ನೇಹಿತರೇ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.

ತುಮಕೂರಿನ ಕೊರಟಗೆರೆ ಮೂಲದ ಯುವಕನಿಗೆ ಹಾಗೂ ಅದೇ ಊರಿನ ಯುವತಿ ಮಧ್ಯೆ ಪ್ರೇಮಾಂಕುರವಾಗಿದೆ. ಕಳೆದ ವಾರ ಯುವತಿಯನ್ನು ಭೇಟಿಯಾಗಿದ್ದ ಯುವಕ ಆಕೆಯಿಂದ ಮೊಬೈಲ್ ತೆಗೆದುಕೊಂಡಿದ್ದನು.

ಮೊಬೈಲ್ ಕೊಡುವಂತೆ ಎರಡು ದಿನಗಳ ಹಿಂದೆ ಯುವತಿ ಕರೆ ಮಾಡಿದ್ದಳು. ಆಗ ಮೆಜೆಸ್ಟಿಕ್ ಗೆ ಬಾ ಮೊಬೈಲ್ ಕೊಡುತ್ತೇನೆ ಎಂದು ಯುವಕ ಹೇಳಿದ್ದಾನೆ. ಇದನ್ನು ನಂಬಿ ಯುವತಿ ಬೆಂಗಳೂರಿಗೆ ಬಂದಿದ್ದಾಳೆ.

ಬೆಂಗಳೂರಿಗೆ ಬಂದ ಯುವತಿ ತನ್ನ ಮೊಬೈಲ್ ಕೊಡುವಂತೆ ಯುವಕನನ್ನು ಕೇಳಿದ್ದಾಳೆ. ಈ ವೇಳೆ ಮೊಬೈಲ್ ಕೊಡುವುದಾಗಿ ಹೇಳಿ ಗಿರಿನಗರದ ಈರಣ್ಣಗುಡ್ಡೆಯ ಸ್ನೇಹಿತನ ರೂಮ್ ಗೆ ಕರೆದುಕೊಂಡು ಹೋಗಿದ್ದಾನೆ. 

ರೂಂನಲ್ಲಿ ಆಕೆಯ ಜೊತೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ನಂತರ ರೂಮಿಗೆ ಬಂದ ಯುವಕನ ಸ್ನೇಹಿತ ಸಹ ಯುವತಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಆಗ ಯುವತಿ ಜೋರಾಗಿ ಕಿರುಚಿಕೊಂಡಿದ್ದರಿಂದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಯುವತಿಯನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?