ರಾಜ್ಯ

ಮಹದಾಯಿ ಯೋಜನೆ: ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಕರ್ನಾಟಕ ಸರ್ಕಾರದ ಪ್ರಸ್ತಾವನೆ ಸಲ್ಲಿಕೆ

Nagaraja AB

ಬೆಂಗಳೂರು: ಮಹದಾಯಿಯ ಕಳಸಾ- ಬಂಡೂರಿ ನಾಲಾ ತಿರುವು ಯೋಜನೆಗೆ ಅನುಮೋದನೆ ಪಡೆಯಲು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಯೋಜನೆಗೆ ಅನುಷ್ಠಾನಕ್ಕೆ ಅಗತ್ಯವಾಗಿ ಬೇಕಾಗಿರುವ 26. 96 ಹೆಕ್ಟೇರ್ ಅರಣ್ಯ ಬಳಕೆಗೆ  ಒಪ್ಪಿಗೆ ಪಡೆಯಲು ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವಾಲಯಕ್ಕೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಿದೆ.
 
ಹುಬ್ಬಳ್ಳಿ- ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಗುರಿ ಹೊಂದಿರುವ ಈ ಯೋಜನೆ ಪರಿಸರ ಪರಿಣಾಮ ಅಧ್ಯಯನ ಅಧಿಸೂಚನೆ-2006 ರ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯ 2019ರಲ್ಲಿ ಸ್ಪಷ್ಟಪಡಿಸಿದ್ದು, ಈ ಯೋಜನೆಗೆ ಪರಿಸರ ಅನುಮೋದನೆ ಬೇಕಿಲ್ಲ ಎಂದು ರಾಜ್ಯ ಸರ್ಕಾರ ಪ್ರಸ್ತಾವನೆಯಲ್ಲಿ ತಿಳಿಸಿದೆ.  ಅಲ್ಲದೇ, ಪರಿಸರ ನಿರ್ವಹಣಾ ಯೋಜನೆ ಪ್ರಕಾರ, ಪರಿಸರ ಸಂರಕ್ಷಣಾ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. 

ಪರಿಹಾರಾತ್ಮಕ ಅರಣ್ಯ ಬೆಳೆಸುವ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿ ಪ್ರಕಾರ ಮುನ್ನಡೆಯಲು ಅರಣ್ಯ ಇಲಾಖೆ ತಾಂತ್ರಿಕ ಮಾರ್ಗದರ್ಶನ ನೀಡಬೇಕು. ಅದಕ್ಕೆ ಬೇಕಿರುವ ಹೆಚ್ಚಿರುವ ಅನುದಾನ ಒದಗಿಸಲಾಗುವುದು ಎಂದು ರಾಜ್ಯ ಹೇಳಿದೆ.

SCROLL FOR NEXT