ಸಾಂದರ್ಭಿಕ ಚಿತ್ರ 
ರಾಜ್ಯ

ಭೀಕರ ರಸ್ತೆ ಅಪಘಾತ; ಬೈಕ್‌ಗೆ ಟ್ರಕ್ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಮೂವರು ಸಾವು

ಶುಕ್ರವಾರ ಮುಂಜಾನೆ ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದರ (39), ಶಾಂತವ್ವ ಕಟ್ಟಿಮನಿ (43) ಮತ್ತು ಮಾಂತವ್ವ ಮರಡಿ (75) ಮೃತರು.

ಬಾಗಲಕೋಟೆ: ಶುಕ್ರವಾರ ಮುಂಜಾನೆ ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ.

ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದರ (39), ಶಾಂತವ್ವ ಕಟ್ಟಿಮನಿ (43) ಮತ್ತು ಮಾಂತವ್ವ ಮರಡಿ (75) ಮೃತರು.

ಶ್ರೀಕಾಂತ್ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಮಹಿಳೆಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಪೊಲೀಸರ ಪ್ರಕಾರ, ಬೈಕ್‌ಗೆ ಡಿಕ್ಕಿ ಹೊಡೆಯುವ ಮೊದಲು ಟ್ರಕ್ ಅಮೀನಗಡ ಪಟ್ಟಣದ ಬಳಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹೆದರಿ ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದಾಗಿ ಮೂರು ಕಿಲೋಮೀಟರ್ ಪ್ರಯಾಣಿಸಿದ ನಂತರ ಟ್ರಕ್ ಮತ್ತೆ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮೂವರು ಸವಾರರು ಸಾವಿಗೀಡಾಗಿದ್ದಾರೆ. ನಂತರ ಚಾಲಕ ನಿಯಂತ್ರಣ ಕಳೆದುಕೊಂಡು ವಾಹನ ಪಲ್ಟಿಯಾಗಿದೆ. ಅದೃಷ್ಟವಶಾತ್ ಆ ಸಮಯದಲ್ಲಿ ಬೇರೆ ಯಾವುದೇ ವಾಹನಗಳು ರಸ್ತೆಯಲ್ಲಿ ಇರಲಿಲ್ಲ.

ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಮೀನಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT