ಸಾಂದರ್ಭಿಕ ಚಿತ್ರ 
ರಾಜ್ಯ

ಖಾಲಿ ಇರುವ 58 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿ ಶೀಘ್ರದಲ್ಲೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮೇ 29 ರಂದು ಕರ್ನಾಟಕದಲ್ಲಿ ಶಾಲೆಗಳು ಅಧಿಕೃತವಾಗಿ ಪುನರಾರಂಭಗೊಂಡಿದ್ದರೂ, ಹಲವಾರು ಸರ್ಕಾರಿ ಶಾಲೆಗಳು ಇನ್ನೂ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿವೆ. ಪ್ರಸ್ತುತ ರಾಜ್ಯದ ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಲ್ಲಿ 58 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ಬೆಂಗಳೂರು: ಮೇ 29 ರಂದು ಕರ್ನಾಟಕದಲ್ಲಿ ಶಾಲೆಗಳು ಅಧಿಕೃತವಾಗಿ ಪುನರಾರಂಭಗೊಂಡಿದ್ದರೂ, ಹಲವಾರು ಸರ್ಕಾರಿ ಶಾಲೆಗಳು ಇನ್ನೂ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿವೆ. ಪ್ರಸ್ತುತ ರಾಜ್ಯದ ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಲ್ಲಿ 58 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಶಾಲೆಗಳಲ್ಲಿನ ಕೊರತೆಯನ್ನು ಶೀಘ್ರವಾಗಿ ಸಮಯ ನಿಗದಿಪಡಿಸಿ ಅದನ್ನು ತುಂಬಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ನಾವು ನ್ಯಾಯಾಲಯದಿಂದ ಕಾನೂನು ಅನುಮತಿಗಾಗಿ ಕಾಯುತ್ತಿದ್ದೇವೆ. ಎಲ್ಲಾ ದಾಖಲೆಗಳನ್ನು ಇಲಾಖೆಯ ಕಡೆಯಿಂದ ಮಾಡಲಾಗಿದೆ. ಹೈಕೋರ್ಟ್‌ನಿಂದ ಒಪ್ಪಿಗೆ ಪಡೆದ ತಕ್ಷಣ ಶಿಕ್ಷಕರ ನಿಯೋಜನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.

ಈ ಹಿಂದೆ ವಿವಾಹಿತ ಮಹಿಳೆಯರು ತಮ್ಮ ತಂದೆಯ ಆದಾಯ ಪ್ರಮಾಣಪತ್ರವನ್ನು ಸಲ್ಲಿಸಿದ್ದರು. ಪತಿಯ ಆದಾಯ ಪ್ರಮಾಣಪತ್ರಕ್ಕೆ ಮಾತ್ರ ಅವಕಾಶವಿದೆ ಎಂದು ನಿಯಮ ಹೇಳಿರುವುದರಿಂದ ಪಟ್ಟಿಯಲ್ಲಿ ಪರಿಗಣಿಸಲಾಗಿಲ್ಲ. ಹೈಕೋರ್ಟ್ ಮಧ್ಯಪ್ರವೇಶದ ನಂತರ, ಬಿಜೆಪಿ ಸರ್ಕಾರವು 15,000 ಖಾಲಿ ಹುದ್ದೆಗಳ ಪೈಕಿ 13,351 ನೇಮಕಾತಿಯನ್ನು ಪೂರ್ಣಗೊಳಿಸಿತ್ತು. ಆ ಬಳಿಕ ಮತ್ತೆ ಕೆಲವು ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.

8,500 ಹಂಗಾಮಿ ಶಿಕ್ಷಕರ ನೇಮಕಾತಿಯನ್ನೂ ಇಲಾಖೆ ತೆರವುಗೊಳಿಸುತ್ತಿದೆ. ಆದಾಗ್ಯೂ, ಕ್ರಮೇಣ ಹೆಚ್ಚಿನ ಶಿಕ್ಷಕರನ್ನು ಕಾಯಂ ಆಗಿ ನೇಮಕ ಮಾಡಿಕೊಳ್ಳುವ ಅಗತ್ಯವಿದೆ. ಆದ್ಯತೆಯ ಮೇಲೆ ಸಮಸ್ಯೆಯನ್ನು ಪರಿಹರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.

ಸುಮಾರು 87 ಸಾವಿರ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದು, ಕೇವಲ 20 ಸಾವಿರ ಮಂದಿ ಅರ್ಹರಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಏಕೆ ತೆರವುಗೊಳಿಸಲಿಲ್ಲ. ಶಾಲೆಗಳು ಮೇ ಅಂತ್ಯದ ವೇಳೆಗೆ ಪ್ರಾರಂಭವಾಗಲು ಸಿದ್ಧವಾಗಿವೆ, ಅವರು ಅದನ್ನು ಮಾರ್ಚ್‌ನಲ್ಲಿ ಮಾಡಬಹುದಿತ್ತು. ಪ್ರಸ್ತುತ ಸರ್ಕಾರ ವರ್ಗಾವಣೆಗೆ ಅನುಮೋದನೆ ನೀಡಿದ್ದು, ಆದಷ್ಟು ಬೇಗ ಅನುಷ್ಠಾನಕ್ಕೆ ಒತ್ತಾಯಿಸಲಾಗುವುದು ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್