ಯುವಕನಿಗೆ ಚಪ್ಪಲಿಯಲ್ಲಿ ಹೊಡೆದ ಯುವತಿ 
ರಾಜ್ಯ

ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ವ್ಯಕ್ತಿಗೆ ಯುವತಿಯಿಂದ ಚಪ್ಪಲಿ ಏಟು, ವಿಡಿಯೊ ವೈರಲ್

ತನಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನಿಗೆ ವಿದ್ಯಾರ್ಥಿನಿಯೊಬ್ಬಳು ಧೈರ್ಯವಾಗಿ ತನ್ನ ಪಾದರಕ್ಷೆಯಿಂದ ಹೊಡೆದ ಘಟನೆ ಉಡುಪಿ ಜಿಲ್ಲೆಯ ವಾಕ್ವಾಡಿ ರಸ್ತೆಯಲ್ಲಿ ನಡೆದಿದೆ.

ಉಡುಪಿ: ತನಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನಿಗೆ ವಿದ್ಯಾರ್ಥಿನಿಯೊಬ್ಬಳು ಧೈರ್ಯವಾಗಿ ತನ್ನ ಪಾದರಕ್ಷೆಯಿಂದ ಹೊಡೆದ ಘಟನೆ ಉಡುಪಿ ಜಿಲ್ಲೆಯ ವಾಕ್ವಾಡಿ ರಸ್ತೆಯಲ್ಲಿ ನಡೆದಿದೆ.

ವಿದ್ಯಾರ್ಥಿನಿಯು ತನ್ನ ಹಾಸ್ಟೆಲ್‌ನಿಂದ ಬೀಜಾಡಿ ರಸ್ತೆಯಲ್ಲಿ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬಾರ್ಕೂರಿನ ನಜೀರ್ ಎಂಬಾತ ಹಿಂದಿನಿಂದ ಆಕೆಯ ಬಳಿಗೆ ಬಂದು ಅವಾಚ್ಯವಾಗಿ ಕಿರುಕುಳ ನೀಡಲಾರಂಭಿಸಿದ. ಗಾಬರಿ ಮತ್ತು ಭಯಗೊಂಡ ವಿದ್ಯಾರ್ಥಿನಿ ಧ್ವನಿ ಎತ್ತಿ ಸ್ಥಳೀಯ ನಿವಾಸಿಗಳಿಗೆ ಪರಿಸ್ಥಿತಿಯನ್ನು ತಿಳಿಸಿದಳು.

ಸ್ಥಳೀಯರು ಅವನನ್ನು ಸ್ಥಳದಲ್ಲಿ ಹಿಡಿದು ಹುಡುಗಿ ತನ್ನ ಶೂನಿಂದ ಅವನನ್ನು ಹೊಡೆಯಲು ಅವಕಾಶ ಮಾಡಿಕೊಟ್ಟರು. ನಂತರ ಪೊಲೀಸರಿಗೆ ಮಾಹಿತಿ ತಿಳಿಸಿ ಸ್ಥಳಕ್ಕೆ ಕರೆಸಿಕೊಂಡು ಆರೋಪಿಯನ್ನು ಒಪ್ಪಿಸಿದ್ದಾರೆ. ವ್ಯಕ್ತಿಯ ಅಸಭ್ಯ ವರ್ತನೆಯನ್ನು ಕಂಡ ಸ್ಥಳೀಯ ನಿವಾಸಿಗಳ ಸಹಾಯದಿಂದ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿ ಕಾಮುಕನಿಗೆ ಭಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್ ಜನರು ಅನಕ್ಷರಸ್ಥರು.. ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

48 ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

SCROLL FOR NEXT