ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ
ಧಾರವಾಡದ ಬೈಪಾಸ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಧಾರವಾಡ: ಧಾರವಾಡದ ಬೈಪಾಸ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಲಾರಿ-ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.