ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ: ವಿಪಕ್ಷಗಳಿಗೆ ಡಿಸಿಎಂ ಡಿಕೆ ಶಿವಕುಮಾರ್​​​ ಟಾಂಗ್

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿಯೋಜನೆ ಜಾರಿ ಬೆನ್ನಲ್ಲೇ ವಿಪಕ್ಷಗಳ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷ ಕಿಡಿಕಾರಿದ್ದು, ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ ಎಂದು ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿಯೋಜನೆ ಜಾರಿ ಬೆನ್ನಲ್ಲೇ ವಿಪಕ್ಷಗಳ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷ ಕಿಡಿಕಾರಿದ್ದು, ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತವೆ ಎಂದು ಹೇಳಿದ್ದಾರೆ.

ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೇವು. ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಮಾತ್ರ ಉಳಿಯುತ್ತದೆ ಎಂದು ಹೇಳಿದರು.

ಬಿಜೆಪಿ, ಜೆಡಿಎಸ್​​​ ಸ್ನೇಹಿತರು ಟೀಕೆಗಳ ಸುರಿಮಳೆ ಸುರಿಸ್ತಿದ್ದಾರೆ. ವಿಪಕ್ಷಗಳಿಗೆ ಉತ್ತರ ನೀಡುವ ಸಾಮರ್ಥ್ಯ ನಮ್ಮ ಬಳಿ ಇಲ್ಲ. ಮಂಗಳೂರಿನಲ್ಲಿ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದೆವು. ಬಹಳ ಚರ್ಚೆ ಮಾಡಿಯೇ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ನಮ್ಮ ರಾಜ್ಯ ದಿವಾಳಿ ಆಗುತ್ತೆ ಅಂತಾ ಬಿಜೆಪಿಯವರು ಹೇಳುತ್ತಿದ್ದಾರೆ.. ಆದರೆ ಆದಕ್ಕೆ ಆಸ್ಪದ ನೀಡುವುದಿಲ್ಲ.. ಪ್ರತೀಯೊಂದಕ್ಕೂ ಲೆಕ್ಕ ಇಡುತ್ತೇವೆ.. ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳು ನಮ್ಮ ಹೆಮ್ಮೆಯ ಸಂಸ್ಥೆಗಳು.. ಅವುಗಳಿಗೆ ನಷ್ಟವಾಗಲು ಬಿಡುವುದಿಲ್ಲ. ಪ್ರತೀಯೊಂದಕ್ಕೆ ಲೆಕ್ಕ ಇಟ್ಟು ಸರ್ಕಾರದ ವತಿಯಿಂದ ಆ ಹಣವನ್ನು ನೀಡುತ್ತೇವೆ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!