ಕೆಜೆ. ಜಾರ್ಜ್. 
ರಾಜ್ಯ

ಗೃಹ ಜ್ಯೋತಿ ಯೋಜನೆ ಕುರಿತ ಮಾರ್ಗಸೂಚಿಗಳ ಸರಳಗೊಳಿಸಲಾಗುವುದು: ಸಚಿವರು ಕೆಜೆ ಜಾರ್ಜ್

ಗೃಹ ಜ್ಯೋತಿ ಉಚಿತ ವಿದ್ಯುತ್ ಸರಬರಾಜು ಯೋಜನೆ ಕುರಿತ ಮಾರ್ಗಸೂಚಿಗಳನ್ನು ಸರ್ಕಾರ ಸರಳೀಕರಿಸಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು: ಗೃಹ ಜ್ಯೋತಿ ಉಚಿತ ವಿದ್ಯುತ್ ಸರಬರಾಜು ಯೋಜನೆ ಕುರಿತ ಮಾರ್ಗಸೂಚಿಗಳನ್ನು ಸರ್ಕಾರ ಸರಳೀಕರಿಸಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಶನಿವಾರ ಹೇಳಿದ್ದಾರೆ.

ನಿನ್ನೆಯಷ್ಟೇ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಯೋಜನೆ ಕುರಿತು ಮಾತುಕತೆ ನಡೆಸಿದರು.

ಮುಖ್ಯಮಂತ್ರಿಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾರ್ಗಸೂಚಿಗಳ ಸರಳೀಕರಿಸಲಾಗುತ್ತದೆ ಎಂದು ಹೇಳಿದರು.

ಜುಲೈ ತಿಂಗಳಿಂದ ಉಚಿತ ವಿದ್ಯುತ್‌ ಸಿಗಲಿದೆ. ಆಗಸ್ಟ್ 1 ರಿಂದ ಯೋಜನೆ ಜಾರಿಗೆ ಬರಲಿದೆ. ಈ ತಿಂಗಳ ಬಿಲ್‌ ಅನ್ನು ಮಾತ್ರ ಗ್ರಾಹಕರು ಕಟ್ಟಬೇಕು. ಬಹುಶಃ ಕಲಬುರಗಿಯಲ್ಲಿ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ. ಆಧಾರ್ ಲಿಂಕ್ ಆಗಬೇಕು ಎನ್ನುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ. ಜನರಿಗೆ ಸರಳವಾಗಿ ಯೋಜನೆ ತಲುಪಿಸಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಸೋಮವಾರ ಮತ್ತೊಮ್ಮೆ ಅಧಿಕಾರಿಗಳ ಜೊತೆ ಸಭೆ ಇದೆ. ಬಳಿಕ ಎಲ್ಲಾ ಗೊಂದಲಗಳಿಗೂ ಉತ್ತರ ಸಿಗಲಿದೆ ಎಂದು ತಿಳಿಸಿದರು.

ನಾವು 12 ತಿಂಗಳ ಸರಾಸರಿ ತೆಗೆದುಕೊಂಡು ಉಚಿತ ವಿದ್ಯುತ್‌ ಕೊಡುತ್ತೇವೆ. ಷರತ್ತುಗಳನ್ನು ಸರಳಗೊಳಿಸಲು ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇವೆ. ಸೋಮವಾರ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡುತ್ತೇವೆ. ಯೋಜನೆ ಜಾರಿಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ಗೊಂದಲ ಸೃಷ್ಟಿಸ್ತಾರೆ, ನಾವು ಗ್ಯಾರಂಟಿ ಯೋಜನೆ ಜಾರಿ ಮಾಡುವುದಿಲ್ಲ ಎಂದುಕೊಂಡಿದ್ದಾರೆ. ಆದರೆ, ಎಲ್ಲರಿಗೂ ಉಚಿತ ವಿದ್ಯುತ್‌ ಯೋಜನೆ ಜಾರಿಗೊಳಿಸುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್