ವಿದೇಶಿ ಯೂಟ್ಯೂಬರ್ ಮೇಲೆ ಹಲ್ಲೆ 
ರಾಜ್ಯ

ಬೆಂಗಳೂರಿನ ಸಂಡೇಬಜಾರ್ ನಲ್ಲಿ ವಿದೇಶಿ ಯೂಟ್ಯೂಬರ್ ಗೆ ಕಿರುಕುಳ; ವಿಡಿಯೋ ವೈರಲ್, ಡಿಸಿಪಿ ಗಮನಕ್ಕೆ ಪ್ರಕರಣ, ಆರೋಪಿ ಬಂಧನ!

ತನ್ನ ಪಾಡಿಗೇ ವಿಡಿಯೋ ವ್ಲಾಗ್ ಮಾಡುತ್ತಿದ್ದ ವಿದೇಶಿ ಯೂಟ್ಯೂಬರ್ ಗೆ ಸ್ಥಳೀಯ ವ್ಯಾಪಾರಿಯೊಬ್ಬರು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಸಂಡೇ ಬಜಾರ್ ನಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಬೆಂಗಳೂರು: ತನ್ನ ಪಾಡಿಗೇ ವಿಡಿಯೋ ವ್ಲಾಗ್ ಮಾಡುತ್ತಿದ್ದ ವಿದೇಶಿ ಯೂಟ್ಯೂಬರ್ ಗೆ ಸ್ಥಳೀಯ ವ್ಯಾಪಾರಿಯೊಬ್ಬರು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಸಂಡೇ ಬಜಾರ್ ನಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಬೆಂಗಳೂರು ನಗರದ ಚಿಕ್ಕಪಟೇಟೆಯಲ್ಲಿ ವ್ಯಾಪ್ತಿಯಲ್ಲಿ ನಡೆಯುವ ಸಂಡೇಬಜಾರ್ ನಲ್ಲಿ ಈ ಘಟನೆ ನಡೆದಿದ್ದು, ವಿದೇಶಿ ಯೂಟ್ಯೂಬರ್​ ಮೇಲೆ ವ್ಯಾಪಾರಿಯೊಬ್ಬರು ಹಲ್ಲೆ ಯತ್ನ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ವೈರಲ್ ವಿಡಿಯೋದಲ್ಲಿ ಉತ್ಸಾಹದಿಂದಲೇ ನೆದರ್ಲ್ಯಾಂಡ್​ನ ಪೆಡ್ರೋ ಮೊಟಾ ಎಂಬ ವ್ಯಕ್ತಿ ವಿಡಿಯೋ ಮಾಡುತ್ತಿದ್ದ. ಈ ವೇಳೆ ತಾನ್ನು ಇಷ್ಟು ದೊಡ್ಡ ಮಾರುಕಟ್ಟೆಯಲ್ಲಿ ತಾನು ಏನಾದರೂ ಖರೀದಿ ಮಾಡಿಯೇ ತೀರುತ್ತೇನೆ ಎಂದು ಹೇಳುವಾಗಲೇ ಸ್ಥಳೀಯ ವ್ಯಾಪಾರಿಯೋರ್ವ ಆತನ ಕೈ ಹಿಡಿದು ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಅಗ್ರಹಿಸಿದ್ದಾನೆ. 

ಆದರೆ ಆತನ ಮಾತು ಅರ್ಥವಾಗದ ವಿದೇಶಿ ಯೂಟ್ಯೂಬರ್ ಅಲ್ಲಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದ್ದಾನೆ. ಆದರೂ ಆತನನ್ನು ಆ ವ್ಯಾಪಾರಿ ಮತ್ತು ಇತರರು ಅಟ್ಟಾಡಿಸಿದ್ದಾರೆ. ಆದರೆ ಕೆಲವೇ ಕ್ಷಣಗಳ ಅಂತರದಲ್ಲಿ ವಿದೇಶಿ ಯೂಟ್ಯೂಬರ್ ಪಾರಾಗಿದ್ದಾನೆ.  ಈ ಕೃತ್ಯಕ್ಕೆ ಭಾರೀ ಖಂಡನೆ ವ್ಯಕ್ತವಾಗುತ್ತಿದ್ದು, ಪಶ್ಚಿಮ ವಿಭಾಗದ ಡಿಸಿಪಿ ಗಮನಕ್ಕೂ ತರಲಾಗಿದೆ.

ವಿಡಿಯೋದಲ್ಲಿ ಏನಿದೆ..?
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ವಿದೇಶಿ ಪ್ರಜೆ ಲೈವ್ ವಿಡಿಯೋ ಮಾಡುತ್ತ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಈ ವೇಳೆ ಆತನ ವಿರುದ್ಧ ದಿಕ್ಕಿನಿಂದ ಬಂದ ಓರ್ವ ವ್ಯಕ್ತಿ ಆತನನ್ನು ತಡೆದು ನಿಲ್ಲಿಸಿದ್ದಾನೆ. ಆಗ ವಿದೇಶಿ ಪ್ರಜೆ ‘ನಮಸ್ತೆ, ನಮಸ್ಕಾರ್’ ಎಂದು ಮಾತನಾಡಿಸಲು ಮುಂದಾಗಿದ್ದಾರೆ. ಆಗ, ಕೈಹಿಡಿದುಕೊಂಡಿದ್ದ ವ್ಯಕ್ತಿ ಕೈ ತೋರಿಸುತ್ತ ‘ಏನ್ ನಮಸ್ಕಾರ್..? ಏನಿದು’ ಎಂದು ಪ್ರಶ್ನೆ ಮಾಡಿ, ವಿಡಿಯೋ ರೆಕಾರ್ಡಿಂಗ್ ನಿಲ್ಲಿಸು ಎಂದಿದ್ದಾರೆ. ನಂತರ, ಒಂದಷ್ಟು ಮಂದಿ ಯೂಟ್ಯೂಬರ್ ಸುತ್ತುವರಿದಿದ್ದಾರೆ. ಕೂಡಲೇ ಆತ ಪರಾರಿಯಾಗಿ ಅವರಿಂದ ತಪ್ಪಿಸಿಕೊಂಡಿದ್ದಾರೆ.

ಘಟನೆಯ ಕುರಿತು ಮುದಾಸಿರ್ ಅಹಮದ್ ಎಂಬುವವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಘಟನೆ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಘಟನೆಯ ಕುರಿತು ಬೆಂಗಳೂರುನಗರ ಪೊಲೀಸರು ರಿ ಟ್ವೀಟ್​ ಮಾಡಿ, ಅಗತ್ಯ ಕ್ರಮಕ್ಕಾಗಿ ನಿಮ್ಮ ಮನವಿಯನ್ನು ಪಶ್ಚಿಮ ವಿಭಾಗದ ಡಿಸಿಪಿಯವರ ಗಮನಕ್ಕೆ ತರಲಾಗಿದೆ ಎಂದು ಬರೆದಿದ್ದಾರೆ. 

ಆರೋಪಿ ಬಂಧನ: 
ಕಾಟನ್ ಪೇಟೆ ಠಾಣಾ ಪೊಲೀಸರು ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ನವಾಬ್​ ಹಯಾತ್​ ಶರೀಫ್ ಎಂಬಾತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.​ 

ತಪ್ಪಿತಸ್ಥರ ವಿರುದ್ಧ ಕ್ರಮ
ಇನ್ನು ಈ ವೈರಲ್ ವಿಡಿಯೋವನ್ನು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಈ ಕುರಿತು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸೂಚಿಸಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ, ದಕ್ಷಿಣ ಕೊರಿಯಾದ ಯೂಟ್ಯೂಬರ್‌ಗೆ ಮುಂಬೈ ಬೀದಿಯಲ್ಲಿ ಇಬ್ಬರು ವ್ಯಕ್ತಿಗಳು ಲೈವ್ ಸ್ಟ್ರೀಮಿಂಗ್ ಮಾಡುವಾಗ ಕಿರುಕುಳ ನೀಡಿದ್ದರು. ಘಟನೆಯ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಮೊಬೀನ್ ಚಂದ್ ಮೊಹಮ್ಮದ್ ಶೇಖ್ ಮತ್ತು ಮೊಹಮ್ಮದ್ ನಕೀಬ್ ಸದ್ರೇಲಂ ಅನ್ಸಾರಿ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೊರಿಯನ್ ಯೂಟ್ಯೂಬರ್‌ಗೆ ಸಂಪೂರ್ಣ ರಕ್ಷಣೆಯನ್ನು ಭರವಸೆ ನೀಡಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT