ಸಾಂದರ್ಭಿಕ ಚಿತ್ರ 
ರಾಜ್ಯ

ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕನ ವಿರುದ್ಧ ವಂಚನೆ, ಬೆದರಿಕೆ ಆರೋಪ

ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕರೊಬ್ಬರು ತಮ್ಮ ಸಹೋದರನಿಗೆ ವಂಚಿಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕರೊಬ್ಬರು ತಮ್ಮ ಸಹೋದರನಿಗೆ ವಂಚಿಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ಕಮ್ ನಿರ್ದೇಶಕ ರೂಪೇಶ್ ಜಿ ರಾಜ್ ಅವರು ಕೆಲವು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿರುವ ತಮ್ಮ ಸಹೋದರ ಗಿರೀಶ್ ಜಿ ರಾಜ್ ವಿರುದ್ಧ ದೂರು ದಾಖಲಿಸಿದ್ದಾರೆ. 

ಕೆಲವು ವರ್ಷಗಳ ಹಿಂದೆ ಸಿನಿಮಾ ನಿರ್ಮಾಣಕ್ಕಾಗಿ ತನ್ನ ಸಹೋದರ ತನ್ನಿಂದ 33 ಲಕ್ಷ ಮತ್ತು ತನ್ನ ಮೂವರು ಸ್ನೇಹಿತರಿಂದ 1.10 ಕೋಟಿ ಸಾಲ ಪಡೆದು, ಅದನ್ನು ಹಿಂದಿರುಗಿಸುವ ಭರವಸೆ ನೀಡಿದ್ದರು ರೂಪೇಶ್ ದೂರಿನಲ್ಲಿ ತಿಳಿಸಿದ್ದಾರೆ.

ಆದರೂ ಮರುಪಾವತಿ ಮಾಡದ ಕಾರಣ, ಸಾಲ ತೀರಿಸುವಂತೆ ರೂಪೇಶ್ ಅವರ ಮನೆಗೆ ಭೇಟಿ ನೀಡಿದಾಗ ಬೆದರಿಕೆ ಹಾಕಿದ್ದರು. ಗಿರೀಶ್ ಅವರ ಸ್ನೇಹಿತರು ಕೂಡ ರೂಪೇಶ್‌ಗೆ ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಅವರು ತಮ್ಮ ಸಹೋದರನಿಗೆ ಯಾವುದೇ ಹಣವನ್ನು ಸಾಲವಾಗಿ ನೀಡಿಲ್ಲ ಎಂದು ಲಿಖಿತವಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ ಎಂದು ದೂರಿಲ್ಲಿ ಉಲ್ಲೇಖಿಸಲಾಗಿದೆ. 

ಪೊಲೀಸರು ಗಿರೀಶ್ ಮತ್ತು ಆತನ ಮೂವರು ಸ್ನೇಹಿತರ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!