ಪ್ರಾತಿನಿಧಿಕ ಚಿತ್ರ 
ರಾಜ್ಯ

ಬಿಜೆಪಿ ಅವಧಿಯ ರೈತ ವಿರೋಧಿ ನೀತಿಗಳನ್ನು ಹಿಂಪಡೆಯಬೇಕು: ಜೂನ್ 15ರಿಂದ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ 'ರೈತ ವಿರೋಧಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು' ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಜೂನ್ 15 ರಿಂದ ರಾಜ್ಯಾದ್ಯಂತ ‘ರೈತಾಗ್ರಹ ಧರಣಿ’ ಆರಂಭಿಸಲು ನಿರ್ಧರಿಸಿದೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ 'ರೈತ ವಿರೋಧಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು' ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಜೂನ್ 15 ರಿಂದ ರಾಜ್ಯಾದ್ಯಂತ ‘ರೈತಾಗ್ರಹ ಧರಣಿ’ ಆರಂಭಿಸಲು ನಿರ್ಧರಿಸಿದೆ.

ಭಾನುವಾರ ಮಾತನಾಡಿದ ಕೆಆರ್‌ಆರ್‌ಎಸ್ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಬಿಜೆಪಿ ಸರ್ಕಾರವು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಕಾಯ್ದೆ 2020, ಕರ್ನಾಟಕ ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ 2020 ಅನ್ನು ಜಾರಿಗೆ ತಂದಿದೆ ಎಂದರು.

'ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಜೂನ್ 15 ರಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರ ರೈತರ ಪರವಾದ ನೀತಿ ಮತ್ತು ಕಾರ್ಯಕ್ರಮಗಳನ್ನು ಪರಿಚಯಿಸಬೇಕು' ಎಂದು ಹೇಳಿದರು.

ಕಾರ್ಪೊರೇಟ್‌ಗಳಿಗೆ ಸಹಾಯ ಮಾಡಲು ಬಿಜೆಪಿ ಸರ್ಕಾರವು ಮೂರು ಕೃಷಿ ಸಂಬಂಧಿತ ಕಾಯ್ದೆಗಳನ್ನು ಪರಿಚಯಿಸಿತ್ತು. ಈ ಕಾಯ್ದೆಗಳು ರೈತರಿಗೆ ಎಣೆದ ಬಲೆಯಾಗಿದೆ. ಅಧಿಕಾರಕ್ಕೆ ಬಂದ ನಂತರ ಈ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಕಾಂಗ್ರೆಸ್ ತನ್ನ ಭರವಸೆಗಳನ್ನು ಈಡೇರಿಸಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT