ಬಸ್ಸಿನಲ್ಲಿ ಪ್ರಯಾಣಿಸಿ ಮಹಿಳಾ ಪ್ರಯಾಣಿಕರನ್ನು ಮಾತನಾಡಿಸಿದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಶಕ್ತಿ ಯೋಜನೆ: ಮಹಿಳೆಯರ ಉಚಿತ ಪ್ರಯಾಣಕ್ಕೆ ಒರಿಜಿನಲ್ ಐಡಿ ಬೇಕಿಲ್ಲ, ಝರಾಕ್ಸ್ ಸಾಕು

ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ನೀಡಲಾಗಿದ್ದು, ಉಚಿತ ಪ್ರಯಾಣಕ್ಕೆ ಐಡಿ ಪ್ರೂಫ್ ತೋರಿಸಬೇಕು ಎಂದು ಹೇಳಲಾಗಿತ್ತು. ಆದರೆ ಒರಿಜಿನಲ್ ತೋರಿಸಬೇಕಾ...

ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ನೀಡಲಾಗಿದ್ದು, ಉಚಿತ ಪ್ರಯಾಣಕ್ಕೆ ಐಡಿ ಪ್ರೂಫ್ ತೋರಿಸಬೇಕು ಎಂದು ಹೇಳಲಾಗಿತ್ತು. ಆದರೆ ಒರಿಜಿನಲ್ ತೋರಿಸಬೇಕಾ ಅಥವಾ ಝರಾಕ್ಸ್ ಸಾಕಾ ಎಂಬ ಬಗ್ಗೆ ಗೊಂದಲಗಳಿದ್ದವು.

ಹೀಗಾಗಿ ರಾಜ್ಯದ ಹಲವೆಡೆ ಐಡಿ ಪ್ರೂಫ್​ ವಿಚಾರಕ್ಕೆ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಗಲಾಟೆ, ಮಾತಿನ ಚಕಮಕಿಗಳು ನಡೆದಿದ್ದವು. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ನಕಲು ಪ್ರತಿ ತೋರಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಸೋಮವಾರ ಸ್ಪಷ್ಟಪಡಿಸಿದೆ.

ಈ ಮೂಲಕ ಒರಿಜಿನಲ್​ ಐಡಿ ಬೇಕಾ? ಅಥವಾ ನಕಲು(ಝರಾಕ್ಸ್) ಪ್ರತಿ ಇದ್ದರೆ ಸಾಕಾ? ಎನ್ನುವ ಎಲ್ಲಾ ಗೊಂದಲಗಳಿಗೆ ಇದೀಗ ತೆರೆ ಬಿದ್ದಿದೆ.

ಗುರುತಿನ ಚೀಟಿಗೆ ಸಂಬಂಧಿಸಿದಂತೆ ಇಂದು ತಿದ್ದುಪಡಿ ಆದೇಶ ಹೊರಡಿಸಿರುವ ಸಾರಿಗೆ ಇಲಾಖೆ, ಆಧಾರ್ ಕಾರ್ಡ್ ಹಾಗೂ ವೋಟರ್​ ಐಡಿಯ ಝರಾಕ್ಸ್​ ಪ್ರತಿ ಇದ್ದರೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ ಹಾರ್ಡ್ ಮತ್ತು ಸಾಫ್ಟ್ ಕಾಪಿ ಇದ್ದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭ.. ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ': ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯ ಸರ್ಕಾರಕ್ಕೆ ಸೆಡ್ಡು: ಕಲಬುರಗಿಯಲ್ಲಿ ನಡೆದ RSS ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯ, Congress ಕಾರ್ಯಕರ್ತರು!

ತಮ್ಮ ಪಕ್ಷದ ಡಿಸಿಎಂಗೆ ಮತ ಹಾಕಬೇಡಿ ಎಂದು ಬಿಹಾರಿಗಳಿಗೆ ಬಿಜೆಪಿ ನಾಯಕ ಮನವಿ!

'96 ಲಕ್ಷ ನಕಲಿ ಮತದಾರರ ಸೇರ್ಪಡೆ': ಚುನಾವಣಾ ಆಯೋಗದ ವಿರುದ್ಧ ರಾಜ್ ಠಾಕ್ರೆ ಕಿಡಿ

ಶಿಮ್ಲಾದಲ್ಲಿ ಪಂಚಾಯತ್ ಮುಖ್ಯಸ್ಥನಿಂದ ಬಾಲಕಿ ಮೇಲೆ ಅತ್ಯಾಚಾರ!

SCROLL FOR NEXT