ರಾಜ್ಯ

ಬೆಂಗಳೂರಿನ ಐಟಿ ಕಂಪನಿಗೆ ಬಾಂಬ್ ಬೆದರಿಕೆ

Lingaraj Badiger

ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗೆ ಮಂಗಳವಾರ ಬಾಂಬ್ ಬೆದರಿಕೆ ಕರೆ ಬಂದಿದ್ದು, ಇಕೋಸ್ಪೇಸ್ ಬ್ಯುಸಿನೆಸ್ ಪಾರ್ಕ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕ್ಯಾಂಪಸ್‌ನಲ್ಲಿರುವ ಐಡಿಬಿಒ ಕಂಪನಿಗೆ ಇಂದು ಮಧ್ಯಾಹ್ನ 2 ಗಂಟೆಗೆ ಬೆದರಿಕೆ ಕರೆ ಮಾಡಲಾಗಿದೆ. ಕಂಪನಿಗೆ ಕರೆ ಮಾಡಿದ ದುಷ್ಕರ್ಮಿಗಳು, ನಿಮ್ಮ ಕಂಪನಿಯ ಆವರಣದಲ್ಲಿ ಬಾಂಬ್ ಇಟ್ಟಿದ್ದು, ಶೀಘ್ರದಲ್ಲೇ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಬಾಂಬ್ ಬೆದರಿಕೆ ಕರೆ ಬಂದ ನಂತರ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ. ನೌಕರರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ.

ಪ್ರಕರಣದ ತನಿಖೆಯನ್ನು ಬೆಳ್ಳಂದೂರು ಪೊಲೀಸರು ವಹಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಮಾಹಿತಿ ನೀಡಬೇಕಿದೆ.

SCROLL FOR NEXT