ಬಸ್‌ಗಳ ಕಿಟಕಿಯಿಂದ ತಮ್ಮ ಗುರುತಿನ ಚೀಟಿಯನ್ನು ಪ್ರದರ್ಶಿಸಿದ ಮಹಿಳೆಯರು 
ರಾಜ್ಯ

ಶಕ್ತಿ ಯೋಜನೆ: 2ನೇ ದಿನ 41.34 ಲಕ್ಷ ಮಹಿಳೆಯರು ಉಚಿತ ಪ್ರಯಾಣ, ಇವರ ಟಿಕೆಟ್ ವೆಚ್ಚ 8.83 ಕೋಟಿ ರೂ.!

ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯ  ಸರ್ಕಾರ ಭಾನುವಾರ ಚಾಲನೆ ನೀಡಿದ್ದು, ಎರಡನೇ ದಿನವಾದ ಸೋಮವಾರ ಬರೋಬ್ಬರಿ 41. 34 ಲಕ್ಷ ಮಹಿಳೆಯರು ಉಚಿತವಾಗಿ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ರಾಜ್ಯ  ಸರ್ಕಾರ ಭಾನುವಾರ ಚಾಲನೆ ನೀಡಿದ್ದು, ಎರಡನೇ ದಿನವಾದ ಸೋಮವಾರ ಬರೋಬ್ಬರಿ 41. 34 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಶಕ್ತಿ ಯೋಜನೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಮೊದಲ ದಿನವಾದ ಭಾನುವಾರ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12ರವರೆಗೆ ಒಟ್ಟು 5.71 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಎರಡನೇ ದಿನವಾದ ಸೋಮವಾರ ಒಟ್ಟು 41,34,726 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಬಿಎಂಟಿಸಿ ಬಸ್​ನಲ್ಲಿ ಒಟ್ಟು 17,57,887, ಕೆಎಸ್ಆರ್ ಟಿಸಿಯಲ್ಲಿ 11,40,057 ಮಹಿಳೆಯರು,  ವಾಯವ್ಯ ಸಾರಿಗೆ ಬಸ್​ನಲ್ಲಿ 8,31,840, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 4,04,942 ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಯಾಣದ ಟಿಕೆಟ್​​ ವೆಚ್ಚ 8,83,53,434 ರೂ. ಆಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಭಾನುವಾರ ಶಕ್ತಿ ಯೋಜನೆಗೆ ಚಾಲನೆ ಸಿಕ್ಕಿದ್ದರೂ ವಾರಾಂತ್ಯವಾದ ಕಾರಣ ಕಚೇರಿಗಳಿಗೆ ರಜೆ ಇತ್ತು. ಆದರೆ ಸೋಮವಾರ ಕೆಲಸದ ದಿನವಾಗಿದ್ದರಿಂದ ಹೆಚ್ಚಿನ‌ ಸಂಖ್ಯೆಯಲ್ಲಿ ಮಹಿಳೆಯರು ಸಂಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ