ವರುಣಾ ಕ್ಷೇತ್ರದಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಮನವಿ 
ರಾಜ್ಯ

ವರುಣಾ ಕ್ಷೇತ್ರದಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಮನವಿ: ಚರ್ಚಿಸಿ ನಿರ್ಧಾರ ಎಂದು ಸಿಎಂ ಸಿದ್ದರಾಮಯ್ಯ ಆಶ್ವಾಸನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಫಿಲಂ ಸಿಟಿ ನಿರ್ಮಿಸುವಂತೆ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕರ ಸಂಘ ಮನವಿ ಮಾಡಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಫಿಲಂ ಸಿಟಿ ನಿರ್ಮಿಸುವಂತೆ ಚಲನಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕರ ಸಂಘ ಮನವಿ ಮಾಡಿದೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಎಸ್.ವಿ.ರಾಜೇಂದ್ರಸಿಂಗ್ ಬಾಬು ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ. ರಾಜ್ಯ ವಿಧಾನಸಭೆ ಚುನಾವನೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷದ ಗೆದ್ದು ಅಧಿಕಾರಕ್ಕೆ ಬಂದಲ್ಲಿ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸುವುದಾಗಿ ಘೋಷಣೆ ಮಾಡಿತ್ತು.

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2023-24ನೇ ಸಾಲಿನ ಬಜೆಟ್ ಅಧಿವೇಶನ​ ಮುಗಿದ  ನಂತರ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಚಿತ್ರ ನಗರಿ ನಿರ್ಮಾಣಕ್ಕಾಗಿ ಮತ್ತೊಂದು ಸುತ್ತಿನ‌ ಸುದೀರ್ಘ ಚರ್ಚೆ ನಡೆಸಲಾಗುವುದು ಮತ್ತು ನಿಯೋಗವು ಸಲ್ಲಿಸಿದ ಇತರೆ ಮನವಿಗಳ ಬಗ್ಗೆಯೂ ಕ್ರಮ ಕೈಗೊಳ್ಳುವುದು' ಎಂದು ಭರವಸೆ ನೀಡಿದರು.

ಪ್ರತಿ ಬಾರಿ ಬಜೆಟ್‌ನಲ್ಲಿ ಫಿಲ್ಮ್‌ ಸಿಟಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಘೋಷಣೆ ಆಗುತ್ತಲೇ ಇರುತ್ತಲೇ ಇದೆ ವಿನಃ ಯಾವುದೇ ಬೆಳವಣಿಗೆ ಕಾಣುತ್ತಿಲ್ಲ. 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮೈಸೂರಿನಲ್ಲಿ ಫಿಲ್ಮ್‌ ಸಿಟಿ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟಿತ್ತು.

1980ರ ದಶಕದಲ್ಲಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಅವಧಿಯಲ್ಲಿ ಹೆಸರಘಟ್ಟದಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. 2004ರವರೆಗೂ ಏನೂ ಆಗಿಲ್ಲ, ಆಗಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಘೋಷಣೆ ಮಾಡಿ ಯೋಜನೆಗೆ ಚಾಲನೆ ನೀಡಿದರು. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ರಾಜ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿ, ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರವಾದ ರಾಮನಗರದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದರು.

ಮುಂದಿನ ವರ್ಷ, ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕನಕಪುರ ರಸ್ತೆಯ ದೇವಿಕಾ ರಾಣಿ ರೋರಿಚ್ ಅವರ ಎಸ್ಟೇಟ್‌ನಲ್ಲಿ ನಡೆಯಲಿದೆ ಎಂದು ಘೋಷಿಸಿದರು, ಇದನ್ನು ಪರಿಸರವಾದಿಗಳು ವಿರೋಧಿಸಿದರು. ನಂತರ ಹೆಸರಘಟ್ಟವನ್ನು ಅಂತಿಮಗೊಳಿಸಲಾಯಿತು. ಕೆಲವು ತಿಂಗಳ ನಂತರ, ಪ್ರಸ್ತಾವನೆ ಮತ್ತೆ ಮೈಸೂರಿಗೆ ಬದಲಾಯಿತು.

ಸಿಎಂ ಭೇಟಿ ವೇಳೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಟಿ ಎನ್ ಸೀತಾರಾಮ್, ಬಿಎಸ್ ಲಿಂಗದೇವರು, ನಂಜುಂಡೇಗೌಡ, ಹಿರಿಯ ನಟ ಶ್ರೀನಿವಾಸ ಮೂರ್ತಿ, ಕಲಾವಿದೆ ವಿಜಯಲಕ್ಷ್ಮಿ ಸಿಂಗ್, ಅಕ್ಷತಾ ಪಾಂಡವಪುರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT