ಸಿಎಂ ಸಿದ್ದರಾಮಯ್ಯ 
ರಾಜ್ಯ

ಜುಲೈ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಇಂದಿನಿಂದ ಇಲಾಖಾವಾರು ಪೂರ್ವಭಾವಿ ಸಭೆ

ರಾಜ್ಯದಲ್ಲಿ ನೂತನ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿದೆ. ನೂತನ ಸರ್ಕಾರದ ಲೆಕ್ಕಾಚಾರಗಳು, ಆಯವ್ಯಯಗಳ ಕುರಿತು ಬಜೆಟ್ ಮಂಡನೆಯಾಗಬೇಕಿದೆ.

ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿದೆ. ನೂತನ ಸರ್ಕಾರದ ಲೆಕ್ಕಾಚಾರಗಳು, ಆಯವ್ಯಯಗಳ ಕುರಿತು ಬಜೆಟ್ ಮಂಡನೆಯಾಗಬೇಕಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ತಿಂಗಳು ಜುಲೈ 7ರಂದು ಹೊಸ ಸರ್ಕಾರದ ಒಂದು ಮುಂದಿನ ಆರ್ಥಿಕ ವರ್ಷದವರೆಗಿನ ಬಜೆಟ್ ನ್ನು ಮಂಡಿಸಲಿದ್ದಾರೆ.

ಬಜೆಟ್ ಮಂಡನೆಗೆ ಸಂಬಂಧಪಟ್ಟಂತೆ ಇಂದಿನಿಂದ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಹಣಕಾಸು ಸಚಿವರು ಆಗಿರುವ ಸಿಎಂ ಸಿದ್ದರಾಮಯ್ಯ ಈ ಹಿಂದೆ 13 ಬಾರಿ ಬಜೆಟ್ ಮಂಡಿಸಿದ್ದು ಇದೀಗ 14ನೇ ಬಾರಿಗೆ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಲಿದ್ದಾರೆ. ಗ್ಯಾರಂಟಿ ಯೋಜನೆಗಳೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಈ ಬಾರಿ ಯಾವುದಕ್ಕೆ ತೆರಿಗೆ ವಿಧಿಸಲಿದೆ, ಯಾವುದಕ್ಕೆ ಎಷ್ಟು ವಿನಾಯ್ತಿ ನೀಡಲಿದೆ, ಯಾವ ಹೊಸ ಯೋಜನೆ ಜಾರಿಗೆ ತರಲಿದೆ, ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳಿಗೆ, ಕೆಲಸಗಳಿಗೆ ಎಷ್ಟು ಹಣ ವಿನಿಯೋಗ ಮಾಡಲಿದೆ ಎಂಬುದು ಗೊತ್ತಾಗಲಿದೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿಯಾಗುತ್ತದೆ, ಒಂದು ಕಡೆ ನೀಡಿದಂತೆ ಮಾಡಿ ಸರ್ಕಾರ ಮತ್ತೊಂದು ಕಡೆ ಜನರಿಂದ ಹಣ ಕಿತ್ತುಕೊಳ್ಳುತ್ತದೆ, ಜನ ಸರ್ಕಾರದ ಬಿಟ್ಟಿ ಭಾಗ್ಯಗಳಿಗೆ ಮೋಸ ಹೋಗಿದ್ದಾರೆ ಎಂಬಿತ್ಯಾದಿ ಟೀಕೆಗಳ ಮಧ್ಯೆ ಈ ಬಾರಿ ಸಿಎಂ ಸಿದ್ದರಾಮಯ್ಯ ಯಾವ ರೀತಿ ಬಜೆಟ್ ಮಂಡಿಸುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ