ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಉದ್ಯಮಿಯ ವಿವರ ಬಳಸಿ ರಾಜ್ಯ ಸರ್ಕಾರಕ್ಕೆ ತೆರಿಗೆ ವಂಚಿಸಿದ ನಾಲ್ವರ ಬಂಧನ

ಉದ್ಯಮಿಯೊಬ್ಬರ ಪಾನ್ ಕಾರ್ಡ್ ಮತ್ತು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಖ್ಯೆಯನ್ನು ಅವರಿಗೆ ತಿಳಿಯದಂತೆ ದುರ್ಬಳಕೆ ಮಾಡಿಕೊಂಡು ತೆರಿಗೆ ವಂಚಿಸಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದ ನಾಲ್ವರನ್ನು ಸೈಬರ್ ಕ್ರೈಂ ಠಾಣೆಯ...

ಬೆಂಗಳೂರು: ಉದ್ಯಮಿಯೊಬ್ಬರ ಪಾನ್ ಕಾರ್ಡ್ ಮತ್ತು ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಖ್ಯೆಯನ್ನು ಅವರಿಗೆ ತಿಳಿಯದಂತೆ ದುರ್ಬಳಕೆ ಮಾಡಿಕೊಂಡು ತೆರಿಗೆ ವಂಚಿಸಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದ ನಾಲ್ವರನ್ನು ಸೈಬರ್ ಕ್ರೈಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ತಮಿಳುನಾಡಿನ ಜಿ ದೆಹಲಿ ಬಾಬು, ಆರ್ ಜಾನಕಿ ರಾಮ್ ರೆಡ್ಡಿ, ಹಿರೆಲಾಲ್ ಮತ್ತು ತೇಜ್ ರಾಜ್ ಗಿರಿಯಾ ಎಂದು ಗುರುತಿಸಲಾಗಿದ್ದು, ಮೂವರೂ ಬೆಂಗಳೂರಿನ ನಿವಾಸಿಗಳಾಗಿದ್ದಾರೆ.

ಹಮೀದ್ ರಿಜ್ವಾನ್ ಅವರು 2011 ರಿಂದ ಎಆರ್‌ಎಸ್ ಎಂಟರ್‌ಪ್ರೈಸಸ್ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದು, ಅವರು ಟ್ರೇಡರ್ ಐಡೆಂಟಿಫಿಕೇಶನ್ ನಂಬರ್(ಟಿಐಎನ್) ಹೊಂದಿದ್ದರು. ಆದರೆ 2013ರಲ್ಲಿ ವ್ಯವಹಾರವನ್ನು ನಿಲ್ಲಿಸಿದ್ದರು ಮತ್ತು ಇದು ಹಮೀದ್ ರಿಜ್ವಾನ್ ಅವರು 2018 ರಲ್ಲಿ ಸಲ್ಲಿಸಿದ ದೂರಿಗೆ ಸಂಬಂಧಿಸಿದ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, 2017 ರಲ್ಲಿ GST ಪರಿಚಯಿಸಲಾಯಿತು. ಅವರು TIN ನಿಂದ GSTಗೆ ಬದಲಾದರು. 2017-18ರಲ್ಲಿ ಜಿಎಸ್‌ಟಿ ಪಾವತಿ ಮಾಡದಿದ್ದಕ್ಕಾಗಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡರು ಮತ್ತು ರಿಜ್ವಾನ್ ಅವರು ತಮ್ಮ ಸಂಸ್ಥೆಯು 2013 ರಿಂದ ಯಾವುದೇ ವಹಿವಾಟು ನಡೆಸಿಲ್ಲ ಎಂದು ಹೇಳಿದೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಿಜ್ವಾನ್ ಅವರು ಅಪರಿಚಿತ ವ್ಯಕ್ತಿಗಳು ತಮ್ಮ ಪ್ಯಾನ್ ಮತ್ತು ಜಿಎಸ್‌ಟಿ ನಂಬರ್ ಬಳಸಿ ತೆರಿಗೆ ವಂಚಿಸುತ್ತಿದ್ದುದನ್ನು ಮನಗಂಡು ಪೊಲೀಸರಿಗೆ ದೂರು ನೀಡಿದ್ದರು. “ಅವರ ದೂರಿನ ಆಧಾರದ ಮೇಲೆ, ಆರು ವರ್ಷಗಳ ನಂತರ ನಾಲ್ವರನ್ನು ಬಂಧಿಸಲಾಗಿದೆ. ಅವರು 2016-17ರಿಂದ ರಿಜ್ವಾನ್ ಹೆಸರಿನಲ್ಲಿ ವ್ಯವಹಾರ ನಡೆಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ರಿಜ್ವಾನ್‌ನ ಪ್ಯಾನ್ ಕಾರ್ಡ್ ಮತ್ತು ಜಿಎಸ್‌ಟಿ ನಂಬರ್ ಬಳಸಿ ಬ್ಯಾಂಕ್ ಖಾತೆ ತೆರೆದಿದ್ದು, ಜಿಎಸ್‌ಟಿ ಪಾವತಿಸುತ್ತಿರಲಿಲ್ಲ. ಹಲವು ಕೋಟಿ ರೂಪಾಯಿ ತೆರಿಗೆ ವಂಚಿಸಿದ್ದಾರೆ. ನಾವು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಸೇರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT