ನಾಳೆ ಬೆಳಗ್ಗೆ ಸಿಇಟಿ ಫಲಿತಾಂಶ ಪ್ರಕಟ
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ನಾಳೆ ಬೆಳಗ್ಗೆ 9.30ಕ್ಕೆ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಬೆಳಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ಸಿಇಟಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2023ರ ಮೇ 20 ಮತ್ತು ಮೇ 21 ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಈ ಹಿಂದೆ ಜೂನ್ 12 ರಂದು ಸಿಇಟಿ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಸುಮಾರು 30 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ವಿವರಗಳಲ್ಲಿ ಹೊಂದಾಣಿಕೆಯಾಗದ ಕಾರಣ ಫಲಿತಾಂಶದ ದಿನಾಂಕವನ್ನು ಮೂಂದುಡಲಾಗಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.