ರಾಜ್ಯ

ಸಿಎಎ ವಿರೋಧಿ ನಾಟಕ ಪ್ರದರ್ಶನ: ಬೀದರ್ ಶಾಲೆ ವಿರುದ್ಧದ ದೇಶದ್ರೋಹ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Lingaraj Badiger

ಕಲಬುರಗಿ: ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ನಾಟಕ‌ ಪ್ರದರ್ಶನ‌ ಮಾಡಿದ ಆರೋಪದ ಮೇಲೆ ಬೀದರ್ ನ ಶಾಹೀನ್ ಉರ್ದು ಮಾಧ್ಯಮ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ವಿರುದ್ಧ ದಾಖಲಾಗಿದ್ದ ದೇಶದ್ರೋಹದ ಪ್ರಕರಣವನ್ನು ಹೈಕೋರ್ಟ್ ನ ಕಲಬುರಗಿ ಪೀಠ ಬುಧವಾರ ರದ್ದುಪಡಿಸಿದೆ.

ಪ್ರಕರಣ ರದ್ದು ಕೋರಿ ಅಲ್ಲಾವುದ್ದೀನ್​ ಮತ್ತು ಇತರರು ಅರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನಗೌಡರ್ ಅವರು ಶಾಹೀನ್ ಶಾಲೆಯ ಆಡಳಿತ ಮಂಡಳಿಯ ನಾಲ್ವರ ವಿರುದ್ಧದ ದೇಶದ್ರೋಹ ಕೇಸ್​​ನ್ನು ರದ್ದುಗೊಳಿಸಿ​ ಆದೇಶ ಹೊರಡಿಸಿದ್ದಾರೆ.

2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ/ ರಾಷ್ಟ್ರೀಯ ಪೌರತ್ವ ನೋಂದಣಿ/ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸಿ ಮಕ್ಕಳಿಂದ ನಾಟಕ ಪ್ರದರ್ಶಿಸಿದ್ದ ಬೀದರ್ ನಗರದ ಶಾಹೀನ್ ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥ, ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿಯೊಬ್ಬರ ಪಾಲಕರಾದ ಅನುಜಾ ಮಿನ್ಸಾ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಲಾಗಿತ್ತು.

ನಂತರ ಬೀದರ್ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಶಾಲಾ ಆಡಳಿತ ಮಂಡಳಿಯ ಐವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು.

SCROLL FOR NEXT