ಸಾಂದರ್ಭಿಕ ಚಿತ್ರ 
ರಾಜ್ಯ

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಮಂಗಳೂರಿನಲ್ಲಿ ಕಾರ್ಯಾರಂಭ

ದಕ್ಷಿಣ ಕನ್ನಡ ಜಿಲ್ಲೆಯ ಕೋಮು ಸೂಕ್ಷ್ಮ ಕರಾವಳಿ ನಗರ ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ತಡೆಯಲು ಕಾಂಗ್ರೆಸ್ ಸರ್ಕಾರ ರಚಿಸಿರುವ ಆ್ಯಂಟಿ ಕಮ್ಯುನಲ್ ವಿಂಗ್ (ಎಸಿಡಬ್ಲ್ಯು) ತನ್ನ ಕೆಲಸವನ್ನು ಪ್ರಾರಂಭಿಸಿದೆ.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೋಮು ಸೂಕ್ಷ್ಮ ಕರಾವಳಿ ನಗರ ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ತಡೆಯಲು ಕಾಂಗ್ರೆಸ್ ಸರ್ಕಾರ ರಚಿಸಿರುವ ಆ್ಯಂಟಿ ಕಮ್ಯುನಲ್ ವಿಂಗ್ (ಎಸಿಡಬ್ಲ್ಯು) ತನ್ನ ಕೆಲಸವನ್ನು ಪ್ರಾರಂಭಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, ರಾಜ್ಯ ಗೃಹ ಸಚಿವರ ನಿರ್ದೇಶನದಂತೆ ಆ್ಯಂಟಿ ಕಮ್ಯುನಲ್ ವಿಂಗ್ ಅನ್ನು ಎರಡು ದಿನಗಳ ಹಿಂದೆ ರಚಿಸಲಾಗಿದೆ ಎಂದು ಹೇಳಿದರು.

'ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಎಸಿಡಬ್ಲ್ಯು ಸ್ಥಾಪನೆಯ ಘೋಷಣೆ ಮಾಡಿದ್ದರು. ಅದನ್ನು ಈಗ ಸ್ಥಾಪಿಸಲಾಗಿದೆ. ಸಿಟಿ ಸ್ಪೆಷಲ್ ಬ್ರಾಂಚ್ ಇನ್ಸ್‌ಪೆಕ್ಟರ್ ಷರೀಫ್ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಸಹಾಯಕ ಪೊಲೀಸ್ ಕಮಿಷನರ್ ಪಿ.ಎ. ಹೆಗಡೆ ತಂಡದ ನಿಗಾ ವಹಿಸಲಿದ್ದಾರೆ. ಎಸಿಪಿ ಹೆಗಡೆ ನೇರವಾಗಿ ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಸಲಿದ್ದಾರೆ' ಎಂದರು.

'ಎಸಿಡಬ್ಲ್ಯು ಎಲ್ಲಾ ಕೋಮು ಪ್ರಕರಣಗಳು ಮತ್ತು ಅಂತಹ ಪ್ರಕರಣಗಳಲ್ಲಿ ಆರೋಪಿಗಳ ಮೇಲೆ ನಿಗಾ ಇಡುತ್ತದೆ. ಅವರ ಚಟುವಟಿಕೆಗಳನ್ನು ವೀಕ್ಷಿಸಲಾಗುವುದು. ಪ್ರಕರಣದಲ್ಲಿ ಸಂತ್ರಸ್ತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಈ ಸಂಬಂಧ ನ್ಯಾಯಾಲಯಗಳಲ್ಲಿ ಹಿಂದಿನ ಪ್ರಕರಣಗಳನ್ನು ಸಹ ನೋಡಿಕೊಳ್ಳಲಾಗುವುದು' ಎಂದು ಅವರು ವಿವರಿಸಿದರು.

ಕಳೆದ 10 ವರ್ಷಗಳಲ್ಲಿ ವರದಿಯಾಗಿರುವ 200 ಪ್ರಕರಣಗಳ ಮೇಲೆ ತಂಡ ನಿಗಾ ವಹಿಸಲಿದೆ. ಕೋಮುಗಲಭೆ, ದ್ವೇಷ ಭಾಷಣಗಳು, ನೈತಿಕ ಪೊಲೀಸ್‌ಗಿರಿ, ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವುದು ಮತ್ತು ಗೋವು ಕಳ್ಳತನ ಸೇರಿದಂತೆ ಕೋಮುಗಲಭೆಗೆ ಪ್ರಚೋದನೆ ನೀಡುವ ಯಾವುದೇ ವಿಷಯಗಳ ಮೇಲೂ ತಂಡ ನಿಗಾ ಇಡಲಿದೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧದ ಯಾವುದೇ ಪ್ರಕರಣವನ್ನು ಮೊದಲು ನ್ಯಾಯವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ವರದಿ ಮಾಡಲಾಗುವುದು ಮತ್ತು ಎಸಿಡಬ್ಲ್ಯುಗೆ ವರ್ಗಾಯಿಸಲಾಗುತ್ತದೆ. ನಂತರ ಆ ವಿಭಾಗದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.

ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ನೈತಿಕ ಪೊಲೀಸ್ ಗಿರಿ ಪ್ರಕರಣಗಳು ರಾಜ್ಯಕ್ಕೆ ಅಪಖ್ಯಾತಿ ತಂದಿದ್ದು, ಬಂಡವಾಳ ಹೂಡಿಕೆಗೆ ಅಡ್ಡಿಯಾಗಿದೆ. ಕೋಮು ಸೌಹಾರ್ದತೆಯ ದೃಷ್ಟಿಯಿಂದ ಮಂಗಳೂರು ನಗರ ಅತಿಸೂಕ್ಷ್ಮವಾಗಿದೆ. ಸಣ್ಣಪುಟ್ಟ ಕೋಮು ಗಲಭೆಗಳು ಬಿಕ್ಕಟ್ಟಿನ ಪರಿಸ್ಥಿತಿಗೆ ಕಾರಣವಾಗುತ್ತವೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT