ಪ್ರಾತಿನಿಧಿಕ ಚಿತ್ರ 
ರಾಜ್ಯ

ಬಿಪರ್‌ಜಾಯ್ ಚಂಡಮಾರುತ: ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಸೂಚನೆ

ಬಿಪರ್‌ಜಾಯ್ ಚಂಡಮಾರುತ ಗುರುವಾರ ಗುಜರಾತ್‌ಗೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.

ಬೆಂಗಳೂರು: ಬಿಪರ್‌ಜಾಯ್ ಚಂಡಮಾರುತ ಗುರುವಾರ ಗುಜರಾತ್‌ಗೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಕಡಲ ತೀರಗಳಲ್ಲಿ ಹೆಚ್ಚಿನ ಅಲೆಗಳು ಏಳುವ ಬಗ್ಗೆಯೂ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಪ್ರದೇಶದ ಎಲ್ಲಾ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 19ರವರೆಗೆ ಹೆಚ್ಚಿನ ಅಲೆಗಳು ಏಳುವ ಎಚ್ಚರಿಕೆಯನ್ನು ಜಿಲ್ಲಾ ಅಧಿಕಾರಿಗಳು ಘೋಷಿಸಿದ್ದಾರೆ. ಅಲೆಗಳು ಮೂರರಿಂದ ನಾಲ್ಕು ಮೀಟರ್‌ವರೆಗೆ ತಲುಪಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು ಸಹಾಯವಾಣಿಗಳನ್ನು ತೆರೆಯಲಾಗಿದೆ. ಬೀಚ್‌ಗಳ ಮೇಲೆ ನಿಗಾ ಇಡಲು ಮತ್ತು ಯಾರೂ ಸಮುದ್ರದ ಬಳಿ ಹೋಗದಂತೆ ನೋಡಿಕೊಳ್ಳಲು ಜೀವರಕ್ಷಕರು ಮತ್ತು ಕರಾವಳಿ ಕಾವಲು ಪಡೆಗೆ ನಿರ್ದೇಶಿಸಲಾಗಿದೆ.

ಕರಾವಳಿ ಭಾಗದಲ್ಲಿ ಭಾರಿ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರಿನಲ್ಲೂ ಭಾರಿ ಮಳೆಯಾಗಲಿದೆ.

ಇದೇ ವೇಳೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಹಿತಕರವಾದ ವಾತಾವರಣ ಕಂಡುಬಂದಿತು ಮತ್ತು ದಿನ ಕಳೆದಂತೆ ಬಿಸಿಲು ಕಾಣಿಸಿಕೊಂಡಿತು. ನಗರದಲ್ಲಿ ಕಳೆದ ಒಂದು ವಾರದಿಂದಲೂ ಪ್ರತಿದಿನ ಮಳೆ ಸುರಿಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT