ಪ್ರಶಾಂತ್ ಸಂಬರ್ಗಿ 
ರಾಜ್ಯ

ವಂಚನೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ ಐಆರ್ ದಾಖಲು

ಸದಾ ಒಂದಲ್ಲ ಒಂದು ವಿವಾದಗಳಿಂದ ಪ್ರಚಾರದಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ವಿರುದ್ಧ ವಂಚನೆ ಆರೋಪದ ಮೇರೆಗೆ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರು: ಸದಾ ಒಂದಲ್ಲ ಒಂದು ವಿವಾದಗಳಿಂದ ಪ್ರಚಾರದಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ವಿರುದ್ಧ ವಂಚನೆ ಆರೋಪದ ಮೇರೆಗೆ ಎಫ್ ಐಆರ್ ದಾಖಲಾಗಿದೆ. ಉದ್ಯಮಿ ದೇವನಾತ್ ವೈಕ್ಯೆ ನೀಡಿದ ದೂರಿನ ಆಧಾರದ ಮೇಲೆ ಪ್ರಶಾಂತ್ ವಿರುದ್ಧ ಸುಳ್ಳು ದೂರು ದಾಖಲಿಸಿ ವಂಚಿಸಿದ ಆರೋಪದ ಮೇರೆಗೆ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ  ಎಫ್ಐಆರ್ ದಾಖಲಾಗಿದೆ. 

2017ರ ಜುಲೈನಲ್ಲಿ ದೇವನಾತ್ ಅವರು ಸಂಬರಗಿಯಿಂದ ಸಾಲ ಪಡೆದಿದ್ದರು. ಮನೆಯ ಅಸಲಿ ದಾಖಲೆ, ಖಾಲಿ ಚೆಕ್ ಕೊಟ್ಟು ಶ್ಯೂರಿಟಿ ನೀಡಿದ್ದರು. ಬಳಿಕ 2017ರ ಡಿಸೆಂಬರ್‌ನಲ್ಲಿ ಪ್ರಶಾಂತ್​​ಗೆ ದೇವನಾಥ್​ ಹಣ ವಾಪಸ್ ನೀಡಿದ್ದರು. ಆದರೆ ಹೆಚ್ಚಿನ ಬಡ್ಡಿ ಹಣ ನೀಡಬೇಕೆಂದು ಮನೆ ದಾಖಲೆ ನೀಡದೆ ಸಂಬರ್ಗಿ ಸತಾಯಿಸಿದ್ದಾರೆ ಎಂದು ದೂರುದಾರ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ  ವಿವಿಧ ಠಾಣೆಯಲ್ಲಿ ದೇವನಾತ್ ವಿರುದ್ಧ ಸುಳ್ಳು ದೂರು ನೀಡಿದ್ದರು. 

ಈ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರು ಸದ್ಯ ಸುಳ್ಳು ದೂರು ಹಿನ್ನೆಲೆ ಸಂಬರ್ಗಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕಾಗಿ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರು ಕಥೆ ಕೇಳಲ್ಲ, ದುಡ್ಡು ತಗೊಂಡು ಚಿತ್ರ ಮಾಡ್ತಾರೆ ಅಂತಾ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಅವರ ಅಭಿಮಾನಿಗಳ ಕೆಂಗಣ್ಣಿಗೆ ಸಂಬರ್ಗಿ ಗುರಿಯಾಗಿದ್ದರು. ಅಲ್ಲದೇ ಜೆಡಿಎಸ್ ಪಕ್ಷದ ನಾಯಕರಾದ ಹೆಚ್ ಡಿ ದೇವೇಗೌಡ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರ ಕುರಿತು ಟೀಕೆಯಿಂದಾಗಿಯೂ ಸುದ್ದಿಯಲ್ಲಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video

BRICS 2026: ಭಾರತ ಭಿನ್ನಾಭಿಪ್ರಾಯಗಳನ್ನು ಸರಿಯಾಗಿ ನಿರ್ವಹಿಸಲಿ- ಕ್ಸೀ ಜಿನ್ಪಿಂಗ್ ಭಾರತ ಭೇಟಿಗೂ ಮುನ್ನ ಚೀನಾ

ನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಹೇಳಿಕೆಗೆ ರಾಹುಲ್​​ ಗಾಂಧಿ ಆಕ್ಷೇಪ

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ಜೈಪುರದಲ್ಲಿ ಘೋರ ಕೃತ್ಯ: ಪತ್ನಿ, ಮೂವರು ಹೆಣ್ಣು ಮಕ್ಕಳ ತಲೆಯನ್ನು ಬ್ರಿಕ್'ನಿಂದ ಜಜ್ಜಿ ಕೊಂದ ಕ್ರೂರಿ!