ರಾಜ್ಯ

ವಿಜಯಪುರ: ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಕತ್ತಿಗೆ ಚೂರಿ ಇರಿದು ಬರ್ಬರ ಹತ್ಯೆ!

Vishwanath S

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆಕೆಯ ಕತ್ತಿಗೆ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. 

ಸಿಂದಗಿ ಪಟ್ಟಣದ ಹೊರವಲಯದಲ್ಲಿ ಟ್ರಾಕ್ಟರ್ ಶೋ ಬಳಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ 28 ವರ್ಷದ ಗಂಗೂಬಾಯಿ ಯಂಕಂಚಿಯನ್ನು ತಡೆದ ದುಷ್ಕರ್ಮಿಗಳು ಆಕೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿ ನಂತರ ಸ್ಕೂಟರ್ ತೆಗೆದುಕೊಂಡು ಪರಾರಿಯಾಗಿದ್ದಾರೆ. 

ಘಟನೆ ವೇಳೆ ಗಂಗೂಬಾಯಿ ಜೊತೆ ಸೋದರ ಸಂಬಂಧಿ ಸಹ ಇದ್ದರು. ಆದರೆ ದುಷ್ಕರ್ಮಿಗಳು ಅಡ್ಡಗಟ್ಟಿ ದಾಳಿ ನಡೆಸುತ್ತಲೆ ಆತ ಭಯದಿಂದ ಅಲ್ಲಿಂದ ಓಡಿ ಹೋಗಿದ್ದನು. ನಂತರ ಪೊಲೀಸರಿಗೆ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿ ದಾಳಿ ನಡೆಸಿದ್ದರು ಎಂದು ಮಾಹಿತಿ ನೀಡಿದ್ದಾನೆ. 

ಘಟನಾ ಸ್ಥಳಕ್ಕೆ ಸಿಪಿಐ ಡಿ ಹುಲಗಪ್ಪ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT