ಸಂಗ್ರಹ ಚಿತ್ರ 
ರಾಜ್ಯ

ವೃದ್ದೆ ಮೇಲೆ ಹಲ್ಲೆ, ದರೋಡೆ; ನರ್ಸ್ ಬಂಧನ

ವೃದ್ದೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಚಿನ್ನದ ಸರ ದೋಟಿ ಪರಾರಿಯಾಗಿದ್ದ ನರ್ಸ್ ಒಬ್ಬರನ್ನು ನಂದಿನಿ ಲೇಔಟ್ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ವೃದ್ದೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಚಿನ್ನದ ಸರ ದೋಟಿ ಪರಾರಿಯಾಗಿದ್ದ ನರ್ಸ್ ಒಬ್ಬರನ್ನು ನಂದಿನಿ ಲೇಔಟ್ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಲಕ್ಷ್ಮಿ ಅಲಿಯಾಸ್ ಗಂಗಾ (38) ಬಂಧಿತ ನರ್ಸ್. ಶಾಂತಮ್ಮ ಹಲ್ಲೆ ಹಾಗೂ ದರೋಡೆಗೆ ಒಳಗಾದ ವೃದ್ಧ ಮಹಿಳೆಯಾಗಿದ್ದಾರೆ.

ಶಾಂತಮ್ಮ ಅವರು ಲಗ್ಗೆರೆಯಲ್ಲಿ ತಮ್ಮ ಮನೆಯಲ್ಲಿ ಒಂಟಿಯಾಗಿ ವಾಸವಿದ್ದರು. ಬಾಡಿಗೆ ಮನೆಗಳ ಬಗ್ಗೆ ವಿಚಾರಿಸುವ ನೆಪದಲ್ಲಿ ಮಹಿಳೆಯೊಬ್ಬರು ಹಲವು ಬಾರಿ ಶಾಂತಮ್ಮ ಅವರನ್ನು ಸಂಪರ್ಕಿಸಿದ್ದಾರೆ. ಮೇ 25ರಂದು ಮತ್ತೆ ಮನೆಗೆ ಬಂದ ಮಹಿಳೆ ದೊಣ್ಣೆಯಿಂದ ಹೊಡೆದು ಧರಿಸಿದ್ದ ಚಿನ್ನದ ಸರ ದೋಚಿ, ಪರಾರಿಯಾಗಿದ್ದಳು.

ಶಾಂತಮ್ಮ ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಕೊನೆಗೂ ಆರೋಪಿತ ಮಹಿಳೆಯನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧನದ ವೇಳೆ ಕಳವು ಮಾಡಿದ್ದ 80 ಸಾವಿರ ಮೌಲ್ಯದ 20 ಗ್ರಾಂ ಚಿನ್ನದ ಸರ ಕೂಡ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಗಂಗಾ, ಕೋರಮಂಗಲದ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.

ಈ ವರ್ಷದ ಆರಂಭದಲ್ಲಿ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ನಿದ್ರೆ ಬರುವ ಚುಚ್ಚುಮದ್ದು ನೀಡಿ, ಚಿನ್ನದ ಸರವನ್ನು ಕದ್ದಿದ್ದಳು. ಅಶೋಕನಗರ ಪೊಲೀಸರು ಆಕೆಯನ್ನು ಬಂಧನಕ್ಕೊಳಪಡಿಸಿದ್ದರು. ನಂತನ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್