ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಳಗಾವಿ ಭೀಕರ ಸರಣಿ ಅಪಘಾತ: ಇಬ್ಬರು ಸಾವು

ಕಾರು, ಕಂಟೇನರ್‌ಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ‌ ಶನಿವಾರ ನಡೆದಿದೆ.

ಸಂಗ್ರಹ ಚಿತ್ರ
Manjula VN
Updated On : 17 Jun 2023, 1:48 pm

ಬೆಳಗಾವಿ: ಕಾರು, ಕಂಟೇನರ್‌ಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ‌ ಶನಿವಾರ ನಡೆದಿದೆ.

ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಇಂದು ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷತ್- ಭಜರಂಗದಳ ಆಶ್ರಯದಲ್ಲಿ ಪ್ರತಿಭಟನೆ ಆಯೋಜನೆಗೊಂಡಿತ್ತು.

Advertisement

Advertisement

ಇದನ್ನೂ ಓದಿ: ತುಮಕೂರು: ಆ್ಯಕ್ಸೆಲ್​ ಬ್ಲೇಡ್ ಕಟ್ ಆಗಿ ಆಟೋಗೆ ಗುದ್ದಿದ ಕ್ಯಾಂಟರ್; ಮದುವೆ ಮುಗಿಸಿ ವಾಪಸಾಗುತ್ತಿದ್ದ ತಾಯಿ-ಮಗಳು ಸಾವು

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬೆಳಗಾವಿಗೆ ಭೇಟಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಬೆಳಗಾವಿಗೆ ಬರುತ್ತಿದ್ದ ಸ್ವಾಮೀಜಿ ಕಾರು ಮಾರ್ಗ ಮಧ್ಯೆ ಅಪಘಾತಕ್ಕಿಡಾಗಿದ್ದು, ವಾಹನದಲ್ಲಿದ್ದ ಸ್ವಾಮೀಜಿಯ ಇಬ್ಬರು ಸೇವಕರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಕಂಟೇನರ್ ಚಾಲಕ ದಿಢೀರ್ ಬ್ರೇಕ್ ಹಾಕಿದ್ದರಿಂದ ಸ್ವಾಮೀಜಿ ಅವರಿದ್ದ ಕಾರು ಕಂಟೇನರ್‌ಗೆ ಗುದ್ದಿದೆ, ಇದೇ ವೇಳೆ ಕಾರಿಗೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕಂಟೇನರ್ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಗಾಯಗೊಂಡಿದ್ದ ಸ್ವಾಮೀಜಿಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement