ಬಿಬಿಎಂಪಿ ಸಾಂದರ್ಭಿಕ ಚಿತ್ರ 
ರಾಜ್ಯ

2016ರ ಭ್ರಷ್ಟಾಚಾರ ಪ್ರಕರಣ: ಬಿಬಿಎಂಪಿ ಮಾಜಿ ಸಹಾಯಕ ಕಂದಾಯ ಅಧಿಕಾರಿಗೆ 3 ವರ್ಷ ಜೈಲು

2016ರ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಾಜಿ ಸಹಾಯಕ ಕಂದಾಯ ಅಧಿಕಾರಿಗೆ ನ್ಯಾಯಾಲಯ 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಬೆಂಗಳೂರು: 2016ರ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಾಜಿ ಸಹಾಯಕ ಕಂದಾಯ ಅಧಿಕಾರಿಗೆ ನ್ಯಾಯಾಲಯ 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಯಾಗಿದ್ದ ಕೃಷ್ಣೇಗೌಡ ಅವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 23ನೇ ಹೆಚ್ಚುವರಿ ಸಿಟಿ ಸಿವಿಲ್​ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.  

2016ರ ಮೇ 11ರಂದು ಕೊತ್ತನೂರು, ಹುಳಿಮಾವು ಬಳಿ ಆಸ್ತಿ ಜಂಟಿ ಖಾತೆ ಮಾಡಿಕೊಡಲು 20,000 ರೂ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದರು. ಇದೀಗ ಭ್ರಷ್ಟಾಚಾರ ಸಾಬೀತಾದ ಹಿನ್ನೆಲೆಯಲ್ಲಿ 3 ವರ್ಷ ಕಠಿಣ ಜೈಲು ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಲಾಗಿದೆ. ಒಂದು ವೇಳೆ ದಂಡ ಪಾವತಿಸಲು ವಿಫಲರಾದರೆ ಮತ್ತೆ 1 ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದೆ.

ಪ್ರದೀಪ್‌ ಎಂಬುವರು ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ ಎಸಿಬಿ ಪೊಲೀಸರು, ಲಂಚ ಸ್ವೀಕರಿಸುತ್ತಿದ್ದ ಕೃಷ್ಣೇಗೌಡರನ್ನು ಬಂಧಿಸಿದ್ದರು. ಕೊತ್ತನೂರು, ಹುಳಿಮಾವು ಬಳಿ ಆಸ್ತಿ ಜಂಟಿ ಖಾತೆ ಮಾಡಿಕೊಡಲು ಕೃಷ್ಣೇಗೌಡ ಅವರು 20 ಸಾವಿರ ರೂ. ಲಂಚ ಕೇಳಿದ್ದರು. ಈ ಸಂಬಂಧ ಪ್ರದೀಪ್‌ ಎಸಿಬಿಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್