ಕೊಲೆ ಆರೋಪಿಗೆ ಗುಂಡೇಟು 
ರಾಜ್ಯ

ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮರಳು ಮಾಫಿಯಾ ಆರೋಪಿ ಕಾಲಿಗೆ ಗುಂಡೇಟು!

ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ. 

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಮರಳು ಸಾಗಣೆ ತಡೆಯಲು ಯತ್ನಿಸಿದ್ದ ಪೊಲೀಸ್ ಪೇದೆ ಹತ್ಯೆಯ ಆರೋಪಿ, ಮರಳು ಮಾಫಿಯಾದ ಆರೋಪಿ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದು ಮರಳಿ ವಶಕ್ಕೆ ಪಡೆದಿದ್ದಾರೆ. 

ಆರೋಪಿ ನೆಲೋಗಿ ಪೊಲೀಸ್ ಠಾಣೆಯ ಪಿಎಸ್ ಐ ಮೇಲೆ ಹಲ್ಲೆ ಮಾಡಿ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ.  ಈತ ಪೊಲೀಸ್ ಪೇದೆ ಮಯೂರ ಚೌಹಾಣ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾನೆ. 

ಜೇವರ್ಗಿ ಪೊಲೀಸ್ ಠಾಣೆಯ ಮತ್ತೊಬ್ಬ ಪಿಎಸ್ಐ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಸೈಬಣ್ಣ ಕರಜಗಿಗೆ ಗುಂಡೇಟು ಹೊಡೆದಿದ್ದು, ಮರಳಿ ವಾಪಸ್ ವಶಕ್ಕೆ ಪಡೆದಿದ್ದಾರೆ.
 
ಜೇವರ್ಗಿ ತಾಲೂಕಿನ ಮಂಡೇವಾಲದಲ್ಲಿ ಈ ಘಟನೆ ನಡೆದಿದೆ. ಮಯೂರ್ ಚೌಹಾಣ್ ಹತ್ಯೆ ಪ್ರಕರಣದ ಆರೋಪಿ  ವಿಜಯಪುರ ಜಿಲ್ಲೆಯ ಅಲಮೇಲ್ ಗ್ರಾಮದಲ್ಲಿ ಆಶ್ರಯ ಪಡೆದಿದ್ದ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆತನನ್ನು ಬಂಧಿಸಲು ಪೊಲೀಸ್ ತಂಡ ತೆರಳಿತ್ತು. ಅಲ್ಮೇಲ್ ನಿಂದ ಆರೋಪಿಯನ್ನು ಜೇವರ್ಗಿಗೆ ಕರೆತರಲಾಗುತ್ತಿತ್ತು. ಮಾರ್ಗಮಧ್ಯದಲ್ಲಿ ಮುಖ್ಯ ಆರೋಪಿ, ನೆಲೋಗಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಹಾಗೂ ಇತರ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರು ಯತ್ನಿಸಿದರಾದರೂ ಆತ ದಾಳಿ ಮುಂದುವರೆಸಿದ ಕಾರಣ ಕಾಲಿಗೆ ಗುಂಡುಹೊಡೆದು ವಶಕ್ಕೆ ಪಡೆಯಲಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT