ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ತನ್ನಿಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ  ನಡೆದಿದೆ.

ಕಲಬುರಗಿ: ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ  ನಡೆದಿದೆ.

ಮೃತರನ್ನು 36 ವರ್ಷದ ಹಣಮಂತ ಮಕ್ಕಳಾದ 9 ವರ್ಷದ ಓಕಾಂ ಹಾಗೂ 6 ವರ್ಷದ ಅಕ್ಷತಾ ಎಂದು ಗುರುತಿಸಲಾಗಿದೆ.

ಹಣಮಂತ ಪತ್ನಿ ಮಕ್ಕಳೊಂದಿಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದರು. ಆದರೆ ನಿನ್ನೆ ರಾತ್ರಿ ಮಕ್ಕಳೊಂದಿಗೆ ಸ್ವಗ್ರಾಮಕ್ಕೆ ಬಂದಿದ್ದು ನಿನ್ನೆಯೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಮತ್ತು ಮಕ್ಕಳ ಮೃತದೇಹ ಇಂದು ಪತ್ತೆಯಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಕುಂಚಾವರಂ ಪೊಲೀಸರು ಭೇಟಿ ನೀಡಿದ್ದು ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!