ದಿನೇಶ್ ಗುಂಡೂರಾವ್ 
ರಾಜ್ಯ

ಹಾರ, ತುರಾಯಿ ಬದಲು ಪುಸ್ತಕಗಳ ನೀಡಿ: ಸಿಎಂ ಹಾದಿ ಅನುಸರಿಸಿದ ಸಚಿವ ದಿನೇಶ್ ಗುಂಡೂರಾವ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾದರಿಯನ್ನೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೂ ಅನುಸರಿಸಿದ್ದು, ಇನ್ನು ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ಬದಲು ಪುಸ್ತಕಗಳ ನೀಡಿ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾದರಿಯನ್ನೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೂ ಅನುಸರಿಸಿದ್ದು, ಇನ್ನು ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ಬದಲು ಪುಸ್ತಕಗಳ ನೀಡಿ ಎಂದು ಮನವಿ ಮಾಡಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಅವರ ಸೂಚನೆಯ ಮೇರೆಗೆ ಅವರ ಆಪ್ತಕಾರ್ಯದರ್ಶಿ ಕೆ.ಎ. ಹಿದಾಯತ್ತುಲ್ಲ ಅವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಜಿಲ್ಲೆಯ ಉಸ್ತುವಾರಿಯಾಗಿರುವ ದಿನೇಶ್ ಗುಂಡೂರಾವ್ ಅವರಿಗೆ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದಾಗ ಹಾರ, ತುರಾಯಿ ಬದಲು ಪುಸ್ತಕ ಕೊಡುವಂತೆ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾದ ಬೆನ್ನಲ್ಲೇ ತಮಗೆ ಸನ್ಮಾನ ಮಾಡುವ ಸಂದರ್ಭದಲ್ಲಿ ಹಾರ, ಶಾಲು ನೀಡದಂತೆ ಹೇಳಿದ್ದರು, ಅಲ್ಲದೆ, ಕೊಡಲೇಬೇಕೆಂದರೆ ಪುಸ್ತಕಗಳನ್ನು ಕೊಡಿ ಎಂದು ಮನವಿ ಮಾಡಿದ್ದರು. ಸಿದ್ದರಾಮಯ್ಯ ಅವರ ಈ ನಡೆ ಭಾರಿ ಮೆಚ್ಚುಗೆಗೆ ಪಾತ್ರವಾಗಿತ್ತು,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್