ಮಾಜಿ ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ- ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿಂದು ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದಾದರೆ ಸಾಕು ಎಂದರು.

ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಿಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.

ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಬೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದು ಅವರು ತಿಳಿಸಿದರು.

ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನ ಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತಗೆದುಕೊಂಡು ಏನು ಮಾಡಬೇಕು ಎಂದರು.‌ಇನ್ನು‌ ಇದೇ ವೇಳೆ ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

T20 World Cup 2026: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್‌ಗೆ ಆಘಾತ; ತಂದೆ ಖಾನ್ ಚಂದ್ ನಿಧನ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

SCROLL FOR NEXT