ಸಂಗ್ರಹ ಚಿತ್ರ 
ರಾಜ್ಯ

ಖೋ-ಖೋ ಆಡುತ್ತಿದ್ದ 13 ವರ್ಷದ ಬಾಲಕ ಸಾವು

ಶಾಲಾ ಅವಧಿಯ ನಂತರ ಸ್ನೇಹಿತರೊಂದಿಗೆ ಖೋ-ಖೋ ಆಡುತ್ತಿದ್ದ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಗ್ರಾಮದಲ್ಲಿ ನಡೆದಿದೆ.

ಮೈಸೂರು: ಶಾಲಾ ಅವಧಿಯ ನಂತರ ಸ್ನೇಹಿತರೊಂದಿಗೆ ಖೋ-ಖೋ ಆಡುತ್ತಿದ್ದ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಶಾಂಕ್ ಎಂದು ಗುರುತಿಸಲಾಗಿದೆ.

ಖೋ-ಖೋ ಆಡುತ್ತಿದ್ದಾಗ ಶಶಾಂಕ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಆರಂಭದಲ್ಲಿ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆಂದು ಹೇಳಲಾಗಿತ್ತು. ಆದರೆ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆಟವಾಡುವಾಗ ಕೆಳಗೆ ಬಿದ್ದ ಪರಿಣಾಮ ಕಲ್ಲಿನಿಂದ ತಲೆಗೆ ಪೆಟ್ಟು ಬಿದ್ದಿದೆ. ತಲೆಗೆ ತೀವ್ರವಾದ ಗಾಯವಾದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆಂಬುದಾಗಿ ತಿಳಿದುಬಂದಿದೆ.

ಕೆಳಗೆ ಬಿದ್ದು ಗಾಯಗೊಂಡಿದ್ದ ಬಾಲಕನನ್ನು ಕೂಡಲೇ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.

ಘಟನೆಯ ದೃಶ್ಯಾವಳಿ ಶಾಲೆಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಘಟನೆ ಬಗ್ಗೆ ಇದುವರೆಗೆ ಯಾವುದೇ ದೂರು ಅಥವಾ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!