ಮೇಯರ್-ಉಪಮೇಯರ್ ಗೆ ಅಭಿನಂದಿಸುತ್ತಿರುವ ಪ್ರಹ್ಲಾದ್ ಜೋಶಿ 
ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ; ಕಾಂಗ್ರೆಸ್‌ಗೆ ಮುಖಭಂಗ

ತೀವ್ರ ಪೈಪೋಟಿಯಿಂದ ಕೂಡಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ. 

ಹುಬ್ಬಳ್ಳಿ: ತೀವ್ರ ಪೈಪೋಟಿಯಿಂದ ಕೂಡಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ. 

ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಮೇಯರ್ ​ಆಗಿ ಬಿಜೆಪಿಯ ವೀಣಾ ಬಾರದ್ವಾಡ್​ ಆಯ್ಕೆಯಾಗಿದ್ದರೆ, ಬಿಜೆಪಿಯ ಸತೀಶ್ ಹಾನಗಲ್ ಸಹ 46 ಮತಗಳನ್ನು ಪಡೆಯುವ ಮೂಲಕ ಉಪ ಮೇಯರ್​ ಆಗಿ ಆಯ್ಕೆಯಾದರು. 

ಇನ್ನು ಮೇಯರ್ ಸ್ಥಾನಕ್ಕೆ ಕಾಂಗ್ರೆಸ್​​ ಪಕ್ಷದಿಂದ ಸುವರ್ಣ ಸ್ಪರ್ಧಿಸಿದ್ದು ಅವರ ಪರ 37 ಮತಗಳು ಮಾತ್ರ  ಚಲಾವಣೆಗೊಂಡಿವೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಈ ಹಿನ್ನೆಲೆಯಲ್ಲಿ ಮೇಯರ್ ಸ್ಥಾನದ ಚುನಾವಣೆಗೆ ಬಿಜೆಪಿಯಿಂದ ವೀಣಾ ಬರದ್ವಾಡ್ ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್​ನಿಂದ ಸುವರ್ಣ ಅವರು ನಾಮಪತ್ರ ಸಲ್ಲಿಸಿದ್ದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ್ಟು ಸದಸ್ಯರ ಬಲ 82 ಆಗಿದ್ದು ಅಧಿಕಾರ ಹಿಡಿಯಲು 46 ಮತಗಳು ಬೇಕಿತ್ತು. ಬಿಜೆಪಿ ಕಾರ್ಪೊರೇಟರ್​ಗಳ ಸಂಖ್ಯೆ 39 ಇದ್ದು, ಕಾಂಗ್ರೆಸ್​​​​ 33, ಪಕ್ಷೇತರ 6, AIMIM 3, ಜೆಡಿಎಸ್ 1 ಸ್ಥಾನ ಹೊಂದಿತ್ತು. 

ಇನ್ನು 8 ಜನಪ್ರತಿನಿಧಿಗಳು, 4 ಶಾಸಕರು, 1 ಸಂಸದ, 3 ಎಂಎಲ್​ಸಿ ಪಾಲಿಕೆ ವ್ಯಾಪ್ತಿಯ ಜನಪ್ರತಿನಿಧಿಗಳು ಸೇರಿಸಿ ಒಟ್ಟು 90 ಮತಗಳಿದ್ದವು, ಇದರಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಪರ 46 ಮತಗಳು ಚಲಾವಣೆಯಾಗಿದ್ದರೆ, ಕಾಂಗ್ರೆಸ್​ನ ಸುವರ್ಣ ಅವರ ಪರ 37 ಮತಗಳ ಚಲಾವಣೆಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ