ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ 
ರಾಜ್ಯ

ಅಕ್ಕಿ ಜಟಾಪಟಿ: ಕೇಂದ್ರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಅಕ್ಕಿ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಜಟಾಪಟಿ ತಾರಕಕ್ಕೇರಿದೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು: ಅಕ್ಕಿ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಜಟಾಪಟಿ ತಾರಕಕ್ಕೇರಿದೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ನಗರದ ಫ್ರೀಡಂ ಪಾರ್ಕ್ ನಲ್ಲಿ ಅಕ್ಕಿ ಬೇಯಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಹಿಂದೆ ಅಕ್ಕಿ ಕೊಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುವ ಉದ್ದೇಶದಿಂದ ಅಕ್ಕಿ ಕೊಡಲ್ಲ ಎಂದು ಹೇಳುತ್ತಿದೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

 ರಾಜ್ಯದ ಜನರಿಗೆ ಐದು ಗ್ಯಾರಂಟಿ ಘೋಷಿಸಲಾಗಿದ್ದು, 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದೇವೆ. ಆದರೆ, ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದ್ದು, ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಿ ಬಡವರಿಗೆ ನೀಡುತ್ತೇವೆ. ಈ ಯೋಜನೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಕೆಲವರು ರಾಗಿ, ಜೋಳ ಕೊಡಿ ಎಂದು ಮನವಿ ಮಾಡಿದ್ದಾರೆ. ಅವರ ಮನವಿಯನ್ನು ಸಹ ಪರಿಗಣಿಸಲಾಗುವುದು ಎಂದು ಹೇಳಿದರು. 

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಅಕ್ಕಿ ಪೂರೈಕೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಕೇಂದ್ರ ಸರ್ಕಾರ ಫ್ರಿಯಾಗಿ ಕೊಡಲ್ಲ, ಬೇರೆ ರಾಜ್ಯ  ಏಪನ್ ಮಾರ್ಕೆಟ್ ನಲ್ಲಿ ಖರೀದಿ ಮಾಡುತ್ತೇವೆ ಎಂದು ತಿಳಿಸಿದರು.
ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT