ರಾಜ್ಯ

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ: ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್

Nagaraja AB

ಬೆಂಗಳೂರು: ಬಿಬಿಎಂಪಿ ವಾರ್ಡ್‌ಗಳ ಮರು ವಿಂಗಡಣೆ ಮಾಡುವಂತೆ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, 12 ವಾರಗಳ ಕಾಲಾವಕಾಶ ನೀಡಿದೆ.

ಬಿಬಿಎಂಪಿ ವಾರ್ಡ್‌ ಮರುವಿಂಗಣೆ ಮಾಡಿ ಹಿಂದಿನ ರಾಜ್ಯ ಸರ್ಕಾರ 2022ರ ಜು.14ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಎತ್ತಿಹಿಡಿದ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಮಾಜಿ ಮೇಯರ್‌ ಬಿ.ಎನ್‌. ಮಂಜುನಾಥ ರೆಡ್ಡಿ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಯು ಸೋಮವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಹಿಂದಿನ ಸರ್ಕಾರ ಅಧಿಸೂಚನೆ ವಿಂಗಡಣೆ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ದೋಷಗಳನ್ನು ಸರ್ಕಾರ ಸರಿಪಡಿಸ ಬೇಕಾಗಿರುವುದರಿಂದ ವಾರ್ಡ್‌ಗಳ ವಿಂಗಡಣೆಯನ್ನು ಪುನರ್‌ಗೊಳಿಸುವುದು ಅನಿವಾರ್ಯವಾಗಿದೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸಲ್ಲಿಸಿದ ನಂತರ ಈ ತೀರ್ಪು ಬಂದಿದೆ.

ಬಿಬಿಎಂಪಿ ಕಾಯ್ದೆಯು 2021 ರ ಜನವರಿಯಲ್ಲಿ  ವಾರ್ಡ್‌ಗಳ ಸಂಖ್ಯೆಯನ್ನು198 ರಿಂದ 243 ಕ್ಕೆ  ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿತು ಮತ್ತು ವಿಂಗಡಣೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಯಿತು. ಅಧಿಸೂಚನೆಯನ್ನು ಪ್ರಶ್ನಿಸಿ ಒಂದು ಬ್ಯಾಚ್ ಅರ್ಜಿಗಳು ಸಲ್ಲಿಕೆಯಾಗಿದ್ದವು, ಆದರೆ ಏಕ ನ್ಯಾಯಾಧೀಶರು ಅಂತಿಮ ಅಧಿಸೂಚನೆಯನ್ನು ಎತ್ತಿಹಿಡಿದಿದ್ದಾರೆ.

ವಾರ್ಡ್ ವಿಂಗಡಣೆಯ ವರದಿಯನ್ನು ಸಲ್ಲಿಸಲು ರಚಿಸಲಾದ ಸಮಿತಿಯು ಸರ್ಕಾರವು ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಅಗತ್ಯವಿದೆ. ಆದರೆ, ವಾರ್ಡ್  ಪುನರ್ ವಿಗಂಡಣೆಯಲ್ಲಿ ಲೋಪಗಳಾಗಿವೆ ಎಂದು ಮೇಲ್ಮನವಿದಾರರು ವಾದಿಸಿದರು. ವಾರ್ಡ್ ಪುನರ್ ವಿಂಗಡಣೆಯಿಂದ ನಗರ ಆಡಳಿತ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಸುಧಾರಣೆಯಾಗಲಿದೆ ಎಂದು ಅವರು ಹೇಳಿದರು. 

SCROLL FOR NEXT