ಸಾಂದರ್ಭಿಕ ಚಿತ್ರ 
ರಾಜ್ಯ

ಕಾಫಿ ಎಸ್ಟೇಟ್‌ನಲ್ಲಿ ಗುಂಡಿಕ್ಕಿ ಮಹಿಳೆ ಹತ್ಯೆ, ದೇಹ ಸುಟ್ಟ ಮೂವರ ಬಂಧನ

ಕಾಫಿ ಎಸ್ಟೇಟ್‌ನಲ್ಲಿ ದಲಿತ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಚಿಕ್ಕಮಗಳೂರಿನಲ್ಲಿ ಮೂವರನ್ನು ಬಂಧಿಸಲಾಗಿದೆ.

ಚಿಕ್ಕಮಗಳೂರು: ಕಾಫಿ ಎಸ್ಟೇಟ್‌ನಲ್ಲಿ ದಲಿತ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಚಿಕ್ಕಮಗಳೂರಿನಲ್ಲಿ ಮೂವರನ್ನು ಬಂಧಿಸಲಾಗಿದೆ.

ಮೃತರನ್ನು 55 ವರ್ಷದ ಜಯಮ್ಮ ಎಂದು ಗುರುತಿಸಲಾಗಿದ್ದು, ಆಕೆ ಅನಾಥೆ ಎಂದು ಪೊಲೀಸರು ತಿಳಿಸಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪೊಲೀಸರ ಮೂಲಗಳ ಪ್ರಕಾರ, ಒಂದು ವಾರದ ಹಿಂದೆ ಸಿದ್ದಾಪುರದ ಸುಪ್ರೀಂ ಕಾಫಿ ಎಸ್ಟೇಟ್‌ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರೊಬ್ಬರು ಚಿಕ್ಕಮಗಳೂರು ಎಸ್‌ಪಿ ಉಮಾ ಪ್ರಶಾಂತ್ ಅವರಿಗೆ ದೂರವಾಣಿ ಕರೆ ಮಾಡಿದ ನಂತರವಷ್ಟೇ ಬೆಳಕಿಗೆ ಬಂದಿದೆ.

ಏಳು ದಿನಗಳ ಹಿಂದೆ ದಲಿತ ಕಾರ್ಮಿಕ ಮಹಿಳೆಯನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಬೂದಿ ಮಾಡಲಾಗಿದೆ ಎಂದು ಕರೆ ಮಾಡಿದವರು ತಿಳಿಸಿದ್ದರು. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದಾಗ ಮಧ್ಯವಯಸ್ಕ ಮಹಿಳೆ ಸುಟ್ಟು ಕರಕಲಾಗಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ.

ಮಹಿಳೆಯನ್ನು ಗುಂಡಿಕ್ಕಿ ಕೊಂದ ನಂತರ ಆಕೆಯ ದೇಹವನ್ನು ಸ್ಥಳದಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಪ್ರತ್ಯೇಕ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಬೆಂಕಿ ಹಚ್ಚಲಾಗಿದೆ ಎಂದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಫಿ ಎಸ್ಟೇಟ್ ಮಾಲೀಕ ಹೆಗ್ಗಡೇಗೌಡ, ಅವರ ಪುತ್ರ ಹಾಗೂ ಕಾರ್ಮಿಕ ನಾಗಪ್ಪ ಅವರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; 'ನಿಮ್ಮ ಪ್ರೀತಿಗೆ ಧನ್ಯವಾದ'- ಭಾವನಾತ್ಮಕ ಪೋಸ್ಟ್

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಹೆಸರಿಗೆ ಸಾಮೂಹಿಕ ವಿವಾಹ, ಆದ್ರೆ 42 ವರರಿಗೆ ಮದುಮಗಳೇ ಇಲ್ಲ; ಮದುವೆ ಹೆಸರಲ್ಲಿ ಬೃಹತ್ ದೋಖಾ, ಹಗರಣ ಬಟಾಬಯಲು!

SCROLL FOR NEXT