ಬೆಳಗಾವಿ ರೈಲು ನಿಲ್ದಾಣ (ಸಂಗ್ರಹ ಚಿತ್ರ) 
ರಾಜ್ಯ

ಬೆಳಗಾವಿಯಲ್ಲಿ ಹರಾಜು ಮೂಲಕ ನಿವೇಶನ ಹಂಚಿಕೆ: ಬಿಯುಡಿಎ ಆಯುಕ್ತರ ವಿರುದ್ಧ ಲೋಕಾಯುಕ್ತ ಎಫ್ಐಆರ್

ಸೆಷನ್ಸ್ ನ್ಯಾಯಾಧೀಶರ ನಿರ್ದೇಶನದ ಆಧಾರದಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬಿಯುಡಿಎ) ಆಯುಕ್ತ ಪ್ರೀತಮ್ ನಸ್ಲಾಪುರೆ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 

ಬೆಳಗಾವಿ: ಬೆಳಗಾವಿ ನಗರದಲ್ಲಿ ಹಲವು ವಸತಿ ನಿವೇಶನಗಳನ್ನು ಹರಾಜು ಮೂಲಕ ಹಂಚಿಕೆ ಪ್ರಕರಣದಲ್ಲಿ 4 ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರ ನಿರ್ದೇಶನದ ಆಧಾರದಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬಿಯುಡಿಎ) ಆಯುಕ್ತ ಪ್ರೀತಮ್ ನಸ್ಲಾಪುರೆ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 

ಬೆಳಗಾವಿಯ ಪ್ರಮುಖ ನಾಯಕ ರಾಜೀವ್ ತೋಪಣ್ಣವರ್ ನಸ್ಲಾಪುರೆ ವಿರುದ್ಧ ದೂರು ನೀಡಿ, ನಸ್ಲಾಪುರೆ ಹಲವು ಅಭಿವೃದ್ಧಿಪಡಿಸಿದ ವಸತಿ ನಿವೇಶನಗಳನ್ನು ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿ ಮಾನವ ಚಾಲಿತ ಹರಾಜಿನ ಮೂಲಕ ಹಂಚಿಕೆ ಮಾಡಿದ್ದರು. ಮಾರ್ಚ್ 19, 2022 ರಂದು ಪ್ರಮುಖ ನಿವೇಶನಗಳನ್ನು, ಕಾರ್ನರ್ ಸೈಟ್ ಗಳನ್ನು ಹರಾಜು ಹಾಕಿದ್ದರು ಎಂದು ತೋಪಣ್ಣವರ್ ಆರೋಪಿಸಿದ್ದಾರೆ. ಈ ಅಕ್ರಮದಿಂದಾಗಿ ಬಿಯುಡಿಎಗೆ 100-150 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು.

ಇದಷ್ಟೇ ಅಲ್ಲದೇ ಬಿಯುಡಿಎ ಹರಾಜು ಮೂಲಕ ನಿವೇಶನಗಳನ್ನು ಅಕ್ರಮವಾಗಿ ಹರಾಜು ಹಾಕಲು ದಾಖಲೆಗಳನ್ನು ಸೃಷ್ಟಿಸಿದೆ ಎಂದೂ ತೋಪಣ್ಣವರ್ ಹೇಳಿದ್ದಾರೆ. ನಸ್ಲಾಪುರೆ ಮತ್ತು ಇತರ ಬಿಯುಡಿಎ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ಮಂಗಳವಾರ ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT