ಡಾ ಜಿ ಪರಮೇಶ್ವರ್ 
ರಾಜ್ಯ

ಫೇಕ್ ನ್ಯೂಸ್‌ ನಿಯಂತ್ರಿಸುವ ಕುರಿತು ಶೀಘ್ರದಲ್ಲೇ ಫೇಸ್‌ಬುಕ್, ಟ್ವಿಟರ್, ಗೂಗಲ್‌ ಸಭೆ ಕರೆಯಲು ಸರ್ಕಾರ ನಿರ್ಧಾರ!

ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮ ಸೈಟ್‌ಗಳು ಮತ್ತು ಗೂಗಲ್, ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ವೇದಿಕೆಗಳೊಂದಿಗೆ ಕೋಮು ಗಲಭೆಯನ್ನು ಪ್ರಚೋದಿಸುವ ಸೂಕ್ಷ್ಮ ವಿಚಾರಗಳ ಪೋಸ್ಟ್‌ಗಳನ್ನು ನಿಯಂತ್ರಿಸಲು ಚರ್ಚೆ ನಡೆಸಲಿದೆ.

ಬೆಂಗಳೂರು: ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮ ಸೈಟ್‌ಗಳು ಮತ್ತು ಗೂಗಲ್, ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ವೇದಿಕೆಗಳೊಂದಿಗೆ ಕೋಮು ಗಲಭೆಯನ್ನು ಪ್ರಚೋದಿಸುವ ಸೂಕ್ಷ್ಮ ವಿಚಾರಗಳ ಪೋಸ್ಟ್‌ಗಳನ್ನು ನಿಯಂತ್ರಿಸಲು ಚರ್ಚೆ ನಡೆಸಲಿದೆ.

ಗೃಹ ಸಚಿವ ಜಿ. ಪರಮೇಶ್ವರ ಅವರು ಬುಧವಾರ ಮಾತನಾಡಿ, ನ್ಯಾಯವ್ಯಾಪ್ತಿಯ ಮಟ್ಟದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅಂತಹ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಪ್ರತಿ ಪೊಲೀಸ್ ಠಾಣೆಗಳಲ್ಲಿ ಸೈಬರ್ ಭದ್ರತಾ ವಿಭಾಗವನ್ನು (cyber security wing) ಸ್ಥಾಪಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

'ನಾವು ಅದನ್ನು ಬಹಳ ಎಚ್ಚರಿಕೆಯಿಂದ ನೋಡಿದ್ದೇವೆ. ಕೆಲವರು (ದುಷ್ಕರ್ಮಿಗಳು) ಅಪರಿಚಿತ ಸ್ಥಳಗಳಿಂದ ಸೂಕ್ಷ್ಮ ವಿಷಯಗಳ ಕುರಿತು ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ. ಜನರನ್ನು ಪ್ರಚೋದಿಸುವ ಸಮಸ್ಯೆಗಳನ್ನು ಸಹ ಪೋಸ್ಟ್ ಮಾಡುತ್ತಿದ್ದಾರೆ. ಸೈಬರ್ ಸೆಲ್‌ಗಳು ಮತ್ತು ಸೈಬರ್ ಪೊಲೀಸ್ ಠಾಣೆಗಳಿಂದ ಅಂತವರನ್ನು ನಿರ್ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ, ಅಂತಹ ಪೋಸ್ಟ್‌ಗಳನ್ನು ತೆಗೆದುಹಾಕಲು ನಾವು ಫೇಸ್‌ಬುಕ್ ಅಥವಾ ಗೂಗಲ್‌ನಂತಹ ಸೈಟ್‌ಗಳೊಂದಿಗೆ ಮಾತುಕತೆ ನಡೆಸಬೇಕಾಗುತ್ತದೆ' ಎಂದು ಪರಮೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹಲವಾರು ಸಂದರ್ಭಗಳಲ್ಲಿ, ಅವರು ಸರಿಯಾಗಿ ಸಹಕರಿಸುವುದಿಲ್ಲ. ಆದ್ದರಿಂದ ನಾವು ಆ ಕಂಪನಿಗಳ ಪ್ರತಿನಿಧಿಗಳಾದ ಅವರ ಭಾರತ ಅಥವಾ ಪ್ರಾದೇಶಿಕ ಮುಖ್ಯಸ್ಥರನ್ನು ಕರೆದು ಅವರೊಂದಿಗೆ ಮಾತನಾಡಲು ನಿರ್ಧರಿಸಿದ್ದೇವೆ. ಹಲವಾರು ಸಂದರ್ಭಗಳಲ್ಲಿ ನಮ್ಮ ಸಂವಹನ ಅಥವಾ ಮೇಲ್‌ಗಳಿಗೆ ಸರಿಯಾದ ಉತ್ತರವಿರುವುದಿಲ್ಲ ಎಂದರು.

'ನಾವು ಈ ನಿಟ್ಟಿನಲ್ಲಿ ಚರ್ಚಿಸಿದ್ದೇವೆ ಮತ್ತು ನಾವು ಶೀಘ್ರದಲ್ಲೇ ಸಭೆ ನಡೆಸುತ್ತೇವೆ. ಸರ್ಕಾರವು ಕೋಮುವಾದಿ ಅಥವಾ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಪೋಸ್ಟ್‌ಗಳ ಬಗ್ಗೆ ನಿಗಾ ವಹಿಸುತ್ತಿದೆ' ಎಂದು ಅವರು ಹೇಳಿದರು. 

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಒಂದು ದಿನದ ನಂತರ ಗೃಹ ಸಚಿವರ ಈ ಹೇಳಿಕೆ ಹೊರಬಿದ್ದಿದೆ.

ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಎಲ್ಲಾ ಸಾಮಾಜಿಕ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಸರ್ಕಾರ ಚರ್ಚೆ ನಡೆಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ ಅವರು, 'ಹೌದು, ಈ ಎಲ್ಲಾ ವೇದಿಕೆಗಳನ್ನು ಬಳಸುವುದರಿಂದ ನಾವು ಎಲ್ಲರೊಂದಿಗೂ ಮಾತನಾಡಬೇಕಾಗುತ್ತದೆ. ಹಲವಾರು ಸಂದರ್ಭಗಳಲ್ಲಿ, ಪೋಸ್ಟಿಂಗ್‌ಗಳನ್ನು ವಿದೇಶ ಅಥವಾ ಅಪರಿಚಿತ ಸಂಖ್ಯೆಗಳಿಂದ ಮಾಡಲಾಗುತ್ತದೆ. ನಮಗೆ ಇವುಗಳ ಮೂಲ ತಿಳಿದಿಲ್ಲದಿರಬಹುದು. ಆದರೆ,  ಅವರು (ಕಂಪನಿ) ತಿಳಿಯುತ್ತಾರೆ. ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಬಹುದು. ಇಂತಹ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ' ಎಂದರು.

ಇಂತವುಗಳು ಏಕೆ ಹೆಚ್ಚುತ್ತಿವೆ ಎಂದು ಹೇಳುವುದು ಕಷ್ಟ. ಆದರೆ, ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಖಾತೆಗಳು ಅಥವಾ ಕಾರ್ಡ್‌ಗಳನ್ನು ಹ್ಯಾಕ್ ಮಾಡುವಂತಹ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಇಂತಹ ಘಟನೆಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿವೆ. ಸೈಬರ್ ಭದ್ರತೆಯನ್ನು ನಿರ್ವಹಿಸುವ ಪೊಲೀಸ್ ಠಾಣೆಗಳಿಗೆ ಜಾಗೃತಿ ಮತ್ತು ಪ್ರಾಮುಖ್ಯತೆ ನೀಡುವ ಮೂಲಕ ಅದನ್ನು ತಡೆಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸಚಿವರು ಹೇಳಿದರು.

ಸೈಬರ್ ಭದ್ರತೆಗಾಗಿ ವಿಶೇಷ ಪೊಲೀಸ್ ಠಾಣೆಗಳಿದ್ದು, ಈಗ ಪ್ರತಿ ಪೊಲೀಸ್ ಠಾಣೆಯಲ್ಲೂ ಸೌಲಭ್ಯ ಕಲ್ಪಿಸುವ ಕುರಿತು ಚರ್ಚೆ ನಡೆದಿದೆ. ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸೈಬರ್ ಭದ್ರತೆಗೆ ಪ್ರತ್ಯೇಕ ವಿಭಾಗವಿದ್ದರೆ, ಪ್ರಕರಣಗಳನ್ನು ಠಾಣೆಯ ವ್ಯಾಪ್ತಿಯಲ್ಲಿಯೇ ಮೇಲ್ವಿಚಾರಣೆ ಮಾಡಬಹುದು ಮತ್ತು ವ್ಯವಹರಿಸಬಹುದು. ಆದ್ದರಿಂದ ಪ್ರಕರಣಗಳ ಸಂಖ್ಯೆ ಕಡಿಮೆಯಾಗಬಹುದು ಎಂದು ಅವರು ಹೇಳಿದರು. 

ಇಡೀ ದೇಶದಲ್ಲೇ ಅತಿ ಹೆಚ್ಚು ಸೈಬರ್ ಕ್ರೈಂ ಪ್ರಕರಣಗಳನ್ನು ಕರ್ನಾಟಕ ಪೊಲೀಸರು ನಿಭಾಯಿಸುತ್ತಿದ್ದಾರೆ ಮತ್ತು ಅವುಗಳನ್ನು ನಿಭಾಯಿಸಲು ಹೆಚ್ಚಿನ ಸಂಖ್ಯೆಯ ತರಬೇತಿ ಪಡೆದ ಸಿಬ್ಬಂದಿಯನ್ನು ಹೊಂದಿದ್ದಾರೆ ಎಂದ ಪರಮೇಶ್ವರ ಅವರು, ಹೆಚ್ಚಿನ ಜನರಿಗೆ ತರಬೇತಿ ನೀಡಲು ಸರ್ಕಾರ ಸಿದ್ಧವಾಗಿದೆ. ನಮ್ಮ ಪೊಲೀಸ್ ಪಡೆಗಳಲ್ಲಿ ಉತ್ತಮ ಸಂಖ್ಯೆಯ ತಾಂತ್ರಿಕ ಜನರಿದ್ದಾರೆ. ಬಿಇ ಮತ್ತು ಡಿಪ್ಲೊಮಾ ಹೊಂದಿರುವವರು ಇದ್ದಾರೆ. ಅಂತವರನ್ನು ಗುರುತಿಸಿ ತರಬೇತಿ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT